ADVERTISEMENT

ನಾಪೋಕ್ಲು: ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಆಗ್ರಹ

ಕುಂಜಿಲ-ಕಕ್ಕಬೆ ಪಂಚಾಯಿತಿ ಗ್ರಾಮಸಭೆ

​ಪ್ರಜಾವಾಣಿ ವಾರ್ತೆ
Published 30 ಸೆಪ್ಟೆಂಬರ್ 2024, 5:07 IST
Last Updated 30 ಸೆಪ್ಟೆಂಬರ್ 2024, 5:07 IST
ನಾಪೋಕ್ಲು ಸಮೀಪದ ಕುಂಜಿಲ-ಕಕ್ಕಬೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪೊಂಗೇರ ಶಿಲ್ಪಾ ಲೋಕೇಶ್ ಅಧ್ಯಕ್ಷತೆಯಲ್ಲಿ ಗ್ರಾಮ ಸಭೆ ನಡೆಯಿತು.
ನಾಪೋಕ್ಲು ಸಮೀಪದ ಕುಂಜಿಲ-ಕಕ್ಕಬೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪೊಂಗೇರ ಶಿಲ್ಪಾ ಲೋಕೇಶ್ ಅಧ್ಯಕ್ಷತೆಯಲ್ಲಿ ಗ್ರಾಮ ಸಭೆ ನಡೆಯಿತು.   

ನಾಪೋಕ್ಲು: ಕುಡಿಯುವ ನೀರಿನ ಪೂರೈಕೆ ಸಮರ್ಪಕ ಆಗುತ್ತಿಲ್ಲ, ಗುಂಡಿ ಬಿದ್ದ ರಸ್ತೆಗಳೂ ಸೇರಿದಂತೆ ಅನೇಕ ಸಮಸ್ಯೆಗಳು ಕುಂಜಿಲ-ಕಕ್ಕಬೆ ಗ್ರಾಮಸಭೆಯಲ್ಲಿ ಕೇಳಿಬಂದವು. 

2024- 25ನೇ ಸಾಲಿನ ಗ್ರಾಮ ಸಭೆಯಲ್ಲಿ ಪಾಲ್ಗೊಂಡ ಗ್ರಾಮಸ್ಥರು ಸಮಸ್ಯೆಗಳ ಸರಮಾಲೆಯನ್ನೇ ಹೇಳಿದರು. ಅಲ್ಲದೆ, ಶೀಘ್ರ ಪರಿಹರಿಸುವಂತೆ ಒತ್ತಾಯಿಸಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪೊಂಗೇರ ಶಿಲ್ಪಾ ಲೋಕೇಶ್ ಅಧ್ಯಕ್ಷತೆಯಲ್ಲಿ ನೋಡಲ್ ಅಧಿಕಾರಿ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಬಾಲಕೃಷ್ಣ ರೈ ಸಮ್ಮುಖದಲ್ಲಿ ಉಪಾಧ್ಯಕ್ಷ ಹಾಗೂ ಸರ್ವ ಸದಸ್ಯರ ಉಪಸ್ಥಿತಿಯಲ್ಲಿ  ನಡೆಯಿತು.

ADVERTISEMENT

ಸದರಿ ಸಭೆಯಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜೆಜೆಎಂ ಕಾಮಗಾರಿ ಪ್ರಾರಂಭಿಸಿ ಮೂರು ವರ್ಷ ಆದರೂ ಪೂರ್ಣವಾಗದ ಬಗ್ಗೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ರಸ್ತೆಗಳು ತುಂಬಾ ಹದಗೆಟ್ಟಿದ್ದು ಸರಿಪಡಿಸಿ ಮತ್ತು ರಸ್ತೆ ಬದಿ ಚರಂಡಿ ಸರಿಪಡಿಸಬೇಕೆಂದು ಆಗ್ರಹಿಸಿದರು. ನಾಲಾಡಿ ಗ್ರಾಮದಲ್ಲಿ ಅರಣ್ಯ ಇಲಾಖೆಯವರು ಕಟ್ಟಡ ಕಟ್ಟುತ್ತಿರುವ ಬಗ್ಗೆ ಕೆಲ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದರು.

ಯವಕಪಾಡಿ ಗ್ರಾಮದ ಸರ್ವೆ ನಂಬರ್ 250/9 ಮತ್ತು 254ರ ಸರ್ಕಾರಿ ಜಾಗದಲ್ಲಿ ಇದ್ದ ಒತ್ತುವರಿಯನ್ನು ಯಾವುದೇ ಕಾರಣಕ್ಕೂ ಮೀಸಲು ಅರಣ್ಯಕ್ಕೆ ಸೇರಿಸಬಾರದು ಎಂದು ಸಭೆಯಲ್ಲಿ ನಿರ್ಣಯಿಸಲಾಯಿತು. ಮನೆಗಳನ್ನು ನಿರ್ಮಿಸಿಕೊಂಡಿರುವ ಹಾಗೂ ತೋಟ ಮಾಡಿರುವ ಜಾಗವನ್ನು ಯಾವುದೇ ಕಾರಣಕ್ಕೂ ಮೀಸಲು ಅರಣ್ಯಕ್ಕೆ ಬಿಟ್ಟು ಕೊಡುವುದಿಲ್ಲ ಎಂದು ಗ್ರಾಮಸ್ಥರು ಪಟ್ಟು ಹಿಡಿದರು.

ಸಭೆಗೆ ಇಲಾಖಾ ಅಧಿಕಾರಿಗಳು ಹಾಜರಾಗದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮ ಪಂಚಾಯತಿ ಸದಸ್ಯರು ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

ನಾಪೋಕ್ಲು ಸಮೀಪದ ಕುಂಜಿಲ-ಕಕ್ಕಬೆ ಗ್ರಾಮ ಪಂಚಾಯಿತಿಯ 2024- 25ನೇ ಸಾಲಿನ ಗ್ರಾಮ ಸಭೆಯಲ್ಲಿ ಪಾಲ್ಗೊಂಡ ಗ್ರಾಮಸ್ಥರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.