ADVERTISEMENT

ವಿರಾಜಪೇಟೆ | ಅವಹೇಳನಕಾರಿ ಸಂದೇಶ: ಸೂಕ್ತ ಕ್ರಮಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 23 ನವೆಂಬರ್ 2024, 14:32 IST
Last Updated 23 ನವೆಂಬರ್ 2024, 14:32 IST
ಫೀಲ್ಡ್‌ ಮಾರ್ಷಲ್‌ ಕೆ.ಎಂ. ಕಾರ್ಯಪ್ಪ ಪ್ರತಿಮೆ
ಫೀಲ್ಡ್‌ ಮಾರ್ಷಲ್‌ ಕೆ.ಎಂ. ಕಾರ್ಯಪ್ಪ ಪ್ರತಿಮೆ   

ವಿರಾಜಪೇಟೆ: ಭಾರತೀಯ ಸೇನೆಯ ಹೆಮ್ಮೆಯ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಹಾಗೂ ಜನರಲ್ ಕೆ.ಎಸ್. ತಿಮ್ಮಯ್ಯ ಅವರ ಬಗ್ಗೆ ವ್ಯಕ್ತಿಯೊಬ್ಬರು ಅವಹೇಳನಕಾರಿ ಸಂದೇಶವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದು, ಜಿಲ್ಲೆಯ ಎಲ್ಲಾ ಮಾಜಿ ಹಾಗೂ ಹಾಲಿ ಸೈನಿಕರಿಗೆ ಮತ್ತು ಅವರ ಅವಲಂಬಿತರಿಗೆ ತುಂಬಾ ನೋವುಂಟು ಮಾಡಿದೆ. ಅವಹೇಳನಕಾರಿ ಸಂದೇಶ ಹರಿಬಿಟ್ಟ ವಿರುದ್ಧ ಸರ್ಕಾರ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಅಖಿಲ ಕರ್ನಾಟಕ ಮಾಜಿ ಸೈನಿಕರ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ಕೊಟ್ಟ್ಕತ್ತಿರ ಸೋಮಣ್ಣ ಆಗ್ರಹಿಸಿದ್ದಾರೆ.

ಪಟ್ಟಣದಲ್ಲಿ ಶನಿವಾರ ನಡೆದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು ‘ಇಂತಹ ಅವಹೇಳನಕಾರಿ ಸಂದೇಶಗಳು ಕೊಡವ ಜನಾಂಗಕ್ಕೆ ಸೀಮಿತಗೊಳಿಸದೆ ಇಡೀ ದೇಶಕ್ಕೆ ವಿಶೇಷವಾಗಿ ಭಾರತೀಯ ಸೇನೆಗೆ ಮಾಡಿದ ಅಪಮಾನವಾಗಿದೆ. ಇಂತಹ ಕೃತ್ಯ ಎಸಗಿದ ವ್ಯಕ್ತಿ ಬಂಧನವಾಗಿದ್ದರೂ, ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಸೂಕ್ತಕ್ರಮ ಕೈಗೊಳ್ಳಬೇಕು. ಈಗಾಗಲೇ ಇದರ ವಿರುದ್ಧ ರಾಜ್ಯಮಟ್ಟದಲ್ಲಿ ಪ್ರತಿಭಟನೆಯನ್ನು ರಾಜ್ಯ ಸಂಘ ಆಯೋಜಿಸಿದ್ದು, ಜಿಲ್ಲೆಯಲ್ಲೂ ಪ್ರತಿಭಟನೆ ನಡೆಸಲಾಗುವುದು’ ಎಂದರು.

ಗೋಷ್ಠಿಯಲ್ಲಿ ಸಂಘದ ಸಹ ಸಂಚಾಲಕ ಬಾಳೆಕುಟ್ಟಿರ ದಿನಿ ಬೋಪಯ್ಯ, ಸಮಿತಿ ಸದಸ್ಯರಾದ ಅಣ್ಣಳಮಾಡ ಬೋಪಯ್ಯ, ಬಾಚುರ ಎಸ್. ಪೂಣಚ್ಚ ಉಪಸ್ಥಿತರಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.