ADVERTISEMENT

ಆಶಾ ಕಾರ್ಯಕರ್ತರಿಗೆ ಛತ್ರಿ, ಬ್ಯಾಗ್ ವಿತರಣೆ

​ಪ್ರಜಾವಾಣಿ ವಾರ್ತೆ
Published 22 ಆಗಸ್ಟ್ 2024, 14:26 IST
Last Updated 22 ಆಗಸ್ಟ್ 2024, 14:26 IST
ಕುಶಾಲನಗರ ಸಮೀಪದ ಕೂಡುಮಂಗಳೂರು ಗ್ರಾಮ ಪಂಚಾಯಿತಿಯಿಂದ ಆಶಾ ಕಾರ್ಯಕರ್ತರಿಗೆ ಪಂಚಾಯಿತಿ ಅಧ್ಯಕ್ಷ ಭಾಸ್ಕರ್ ನಾಯಕ್ ಅವರು ಛತ್ರಿ ಮತ್ತು ಬ್ಯಾಗ್‌ಗಳನ್ನು ವಿತರಿಸಿದರು
ಕುಶಾಲನಗರ ಸಮೀಪದ ಕೂಡುಮಂಗಳೂರು ಗ್ರಾಮ ಪಂಚಾಯಿತಿಯಿಂದ ಆಶಾ ಕಾರ್ಯಕರ್ತರಿಗೆ ಪಂಚಾಯಿತಿ ಅಧ್ಯಕ್ಷ ಭಾಸ್ಕರ್ ನಾಯಕ್ ಅವರು ಛತ್ರಿ ಮತ್ತು ಬ್ಯಾಗ್‌ಗಳನ್ನು ವಿತರಿಸಿದರು   

ಕುಶಾಲನಗರ: ‘ಪಂಚಾಯಿತಿ ವ್ಯಾಪ್ತಿಯಲ್ಲಿ ಡೆಂಗಿ ಹಾಗೂ ಇನ್ನಿತರ ಕಾಯಿಲೆಗಳು ಹರಡದಂತೆ ಮಳೆಯನ್ನು ಲೆಕ್ಕಿಸದೆ ಪ್ರತಿ ಮನೆಗೂ ತೆರಳಿ ಸಾರ್ವಜನಿಕರಿಗೆ ಅರಿವು ಮೂಡಿಸಿದ ಆಶಾ ಕಾರ್ಯಕರ್ತರ ಸೇವೆ ಶ್ಲಾಘನೀಯ’ ಎಂದು ಕೂಡುಮಂಗಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಭಾಸ್ಕರ್ ನಾಯಕ್ ಹೇಳಿದರು.

ಸಮೀಪದ ಕೂಡುಮಂಗಳೂರು ಗ್ರಾಮ ಪಂಚಾಯಿತಿಯಿಂದ ಪಂಚಾಯಿತಿ ವ್ಯಾಪ್ತಿಯ 8 ಜನ ಆಶಾ ಕಾರ್ಯಕರ್ತರಿಗೆ ಛತ್ರಿ ಮತ್ತು ಬ್ಯಾಗ್‌ಗಳನ್ನು ವಿತರಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಶಶಿಕಲಾ, ಸದಸ್ಯರಾದ ಕೆ.ಕೆ.ಭೋಗಪ್ಪ, ಗಿರೀಶ್,
ಪಾರ್ವತಮ್ಮ ರಾಮೇಗೌಡ, ಖತೀಜಾ, ಚೈತ್ರಾ ಮಂಜುನಾಥ್, ಶಿವಮ್ಮ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಂತೋಷ್ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.