ADVERTISEMENT

ಮಡಿಕೇರಿಯ ಹಲವು ದೇವಾಲಯಗಳಿಗೆ ಡಿ.ಕೆ.ಶಿವಕುಮಾರ್ ಭೇಟಿ: ವಿಶೇಷ ಪೂಜೆ ಸಲ್ಲಿಕೆ

​ಪ್ರಜಾವಾಣಿ ವಾರ್ತೆ
Published 11 ಅಕ್ಟೋಬರ್ 2024, 13:39 IST
Last Updated 11 ಅಕ್ಟೋಬರ್ 2024, 13:39 IST
   

ಮಡಿಕೇರಿ: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನಗರದ ವಿವಿಧ ದೇವಾಲಯಗಳಿಗೆ ಶುಕ್ರವಾರ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ನಾಡಿನಲ್ಲಿ ಹಿಂದಿನಿಂದಲೂ ಕಲೆ, ಸಂಸ್ಕೃತಿ ಮತ್ತು ಪರಂಪರೆಯನ್ನು ಉಳಿಸಿ, ಬೆಳೆಸಿಕೊಂಡು ಬರಲಾಗಿದೆ. ದಸರಾ ಹಬ್ಬವನ್ನು ವಿಶೇಷವಾಗಿ ಆಚರಿಸಲಾಗುತ್ತಿದೆ. ಈ ಬಾರಿ ಉತ್ತಮ ಮಳೆ, ಬೆಳೆಯಾಗಿದ್ದು ಎಲ್ಲರಲ್ಲಿ ಸಂತಸ ತಂದಿದೆ ಎಂದು ಅವರು ಇದೇ ವೇಳೆ ಹೇಳಿದರು‌.

ನಗರದ ಶಕ್ತಿ ದೇವತೆಗಳು ಎನಿಸಿದ ಕುಂದೂರುಮೊಟ್ಟೆ ಚೌಟಿ ಮಾರಿಯಮ್ಮ, ದಂಡಿನ ಮಾರಿಯಮ್ಮ, ಕೋಟೆ ಮಾರಿಯಮ್ಮ, ಕಂಚಿ ಕಾಮಾಕ್ಷಿ, ಕೋಟೆ ಮಹಾಗಣಪತಿ, ಪೇಟೆ ಶ್ರೀ ರಾಮಮಂದಿರ, ಕೊದಂಡರಾಮ ದೇವಾಲಯ, ಮುತ್ತಪ್ಪ ದೇವಾಲಯ, ಕರವಾಲೇ ಭಗವತಿ ದೇವಾಲಯ, ಚೌಡೇಶ್ವರಿ ದೇವಾಲಯ, ವಿಜಯ ವಿನಾಯಕ, ದೇಚೂರು ಶ್ರೀರಾಮ ಮಂದಿರ ಹೀಗೆ ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.