ADVERTISEMENT

ಇನ್ನೆರಡು ದಿನ ಕೊಡಗಿನತ್ತ ಬರಬೇಡಿ: ಜಿಲ್ಲಾಧಿಕಾರಿ ಸಲಹೆ

​ಪ್ರಜಾವಾಣಿ ವಾರ್ತೆ
Published 30 ಜುಲೈ 2024, 15:36 IST
Last Updated 30 ಜುಲೈ 2024, 15:36 IST
ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಶಾಂತಳ್ಳಿ ಸಮೀಪ ರಾಜ್ಯಹೆದ್ದಾರಿಗೆ ಗುರುವಾರ ಕುಸಿದ ಮಣ್ಣನ್ನು ತೆರವುಗೊಳಿಸುವ ಕಾರ್ಯಾಚರಣೆ ನಡೆಯಿತು
ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಶಾಂತಳ್ಳಿ ಸಮೀಪ ರಾಜ್ಯಹೆದ್ದಾರಿಗೆ ಗುರುವಾರ ಕುಸಿದ ಮಣ್ಣನ್ನು ತೆರವುಗೊಳಿಸುವ ಕಾರ್ಯಾಚರಣೆ ನಡೆಯಿತು   

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಅಲ್ಲಲ್ಲಿ ರಸ್ತೆಗಳ ಸಂಪರ್ಕ ಕಡಿತಗೊಂಡಿದೆ. ಜುಲೈ 31 ಮತ್ತು ಆಗಸ್ಟ್ 1ರಂದು ಹವಾಮಾನ ಇಲಾಖೆಯು ರೆಡ್‌ ಅಲರ್ಟ್ ಘೋಷಿಸಿದೆ. ಹೀಗಾಗಿ, ಪ್ರವಾಸಿಗರು ತಮ್ಮ ಪ್ರವಾಸವನ್ನು ಮುಂದೂಡಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಪ್ರಕಟಣೆಯಲ್ಲಿ ಸಲಹೆ ನೀಡಿದ್ದಾರೆ.

ದುಬಾರೆ, ಕಾವೇರಿ ನಿಸರ್ಗಧಾಮ ಬಂದ್

ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳಾದ ದುಬಾರೆ, ಹಾರಂಗಿ ಸಾಕಾನೆ ಶಿಬಿರ ಹಾಗೂ ಕಾವೇರಿ ನಿಸರ್ಗಧಾಮಕ್ಕೆ ಜುಲೈ 31 ಹಾಗೂ ಆಗಸ್ಟ್ 1ರಂದು ಪ್ರವಾಸಿಗರಿಗೆ ಪ್ರವೇಶ ನಿಷೇಧಿಸಲಾಗಿದೆ ಎಂದು ವಲಯ ಅರಣ್ಯಾಧಿಕಾರಿ ರತನ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.