ADVERTISEMENT

ಅಪ್ರಾಪ್ತರಿಗೆ ದ್ವಿಚಕ್ರ ವಾಹನ ನೀಡಬೇಡಿ: ಎಎಸ್ಐ ಗಣಪತಿ

ವಿರಾಜಪೇಟೆ ಕ್ರೈಂ ಬ್ರಾಂಚ್‌ನ ಎಎಸ್ಐ ಗಣಪತಿ ಸಲಹೆ

​ಪ್ರಜಾವಾಣಿ ವಾರ್ತೆ
Published 23 ಡಿಸೆಂಬರ್ 2023, 13:12 IST
Last Updated 23 ಡಿಸೆಂಬರ್ 2023, 13:12 IST
ಅಪರಾಧ ತಡೆ ಮಾಸಾಚರಣೆ, ಕಾನೂನು ಅರಿವು ಕಾರ್ಯಕ್ರಮದಲ್ಲಿ ವಿರಾಜಪೇಟೆ ನಗರ ಪೊಲೀಸ್ ಠಾಣೆಯ ಕ್ರೈಂ ಬ್ರಾಂಚ್‌ನ ಎಎಸ್ಐ ಗಣಪತಿ ಅವರನ್ನು ಸನ್ಮಾನಿಸಲಾಯಿತು
ಅಪರಾಧ ತಡೆ ಮಾಸಾಚರಣೆ, ಕಾನೂನು ಅರಿವು ಕಾರ್ಯಕ್ರಮದಲ್ಲಿ ವಿರಾಜಪೇಟೆ ನಗರ ಪೊಲೀಸ್ ಠಾಣೆಯ ಕ್ರೈಂ ಬ್ರಾಂಚ್‌ನ ಎಎಸ್ಐ ಗಣಪತಿ ಅವರನ್ನು ಸನ್ಮಾನಿಸಲಾಯಿತು   

ವಿರಾಜಪೇಟೆ: ‘ಸಾರ್ವಜನಿಕರು ಯಾವುದೇ ಕಾನೂನು ಬಾಹಿರ ಕೆಲಸಗಳಲ್ಲಿ ತೊಡಗಬಾರದು. ಪೋಷಕರು ಅಪ್ರಾಪ್ತ ಮಕ್ಕಳಿಗೆ ದ್ವಿಚಕ್ರ ವಾಹನ ಸೇರಿದಂತೆ ಯಾವುದೇ ವಾಹನವನ್ನು ಚಲಾಯಿಸಲು ಅವಕಾಶ ನೀಡಬಾರದು’ ಎಂದು ವಿರಾಜಪೇಟೆ ಕ್ರೈಂ ಬ್ರಾಂಚ್‌ನ ಎಎಸ್ಐ ಗಣಪತಿ ತಿಳಿಸಿದರು.

ನಗರ ಪೊಲೀಸ್ ಠಾಣೆ ಹಾಗೂ ತಿತಿಮತಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಆಶ್ರಯದಲ್ಲಿ ಶುಕ್ರವಾರ ಅಪರಾಧ ತಡೆ ಮಾಸಾಚರಣೆ ಮತ್ತು ಕಾನೂನು ಅರಿವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ದ್ವಿಚಕ್ರ ಚಾಲನೆ ಮಾಡಬೇಕು. ಕಾಲಕ್ಕೆ ತಕ್ಕಂತೆ ಅಪರಾಧದ ಶೈಲಿಯೂ ಬದಲಾಗುತ್ತಿದೆ. ಸೈಬರ್ ಅಪರಾಧ, ದರೋಡೆ, ಮಾದಕ ವಸ್ತು, ಮಾನವ ಕಳ್ಳ ಸಾಗಾಣಿಕೆ ಅಪರಾಧಗಳು ದಾಖಲಾಗುತ್ತಿದ್ದು, ಜನರು ಈ ಬಗ್ಗೆ ಎಚ್ಚರದಿಂದ ಇರಬೇಕು’ ಎಂದರು.

ADVERTISEMENT

ಪೊಲೀಸ್ ಸಿಬ್ಬಂದಿ ಕಿರಣ್ ಕುಮಾರ್ ಮಾತನಾಡಿದರು.

ಶಾಲೆಯ ಪ್ರಾಂಶುಪಾಲ ಷಡಕ್ಷರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿರಾಜಪೇಟೆ ನಗರ ಪೊಲೀಸ್ ಠಾಣೆಯ ಕ್ರೈಂ ಬ್ರಾಂಚ್‌ನ ಎಎಸ್ಐ ಗಣಪತಿ ಅವರನ್ನು ಸನ್ಮಾನಿಸಲಾಯಿತು.

ಪೊಲೀಸ್ ಸಿಬ್ಬಂದಿ ಸುಬ್ರಮಣಿ, ಶಾಲೆಯ ಎಲ್ಲಾ ವಿದ್ಯಾರ್ಥಿಗಳು, ಬೋಧಕ ಹಾಗೂ ಬೋಧಕೇತರ ವರ್ಗದವರು ಹಾಜರಿದ್ದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.