ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಂಗಳವಾರ ಬೆಳಿಗ್ಗೆ ಸಂಭವಿಸಿದ ಭೂಕಂಪದ ಅನುಭವ ವಿರಾಜಪೇಟೆಯಲ್ಲೂ ಆಗಿದೆ. ಅಲ್ಲಿನ ತೋರ ಹಾಗೂ ಕೆದಮುಳ್ಳೂರು ಗ್ರಾಮಗಳಲ್ಲಿ ಭೂಮಿಯೊಳಗಿಂದ ವಿಚಿತ್ರ ಶಬ್ದ ಕೇಳಿ ಬಂದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಸಂಪಾಜೆಯ ಸಮೀಪ ಗೂನಡ್ಕ ಗ್ರಾಮದಲ್ಲಿ ಕೆಲವು ಮನೆಗಳ ಗೋಡೆಗಳಲ್ಲಿ ಸಣ್ಣಪ್ರಮಾಣದ ಬಿರುಕುಗಳು ಮೂಡಿವೆ.
ಮಡಿಕೇರಿ, ನಾಪೋಕ್ಲು, ಕುಕ್ಕುಂದ, ಕಾಡು, ಬಲ್ಲಮಾವಟ್ಟಿ. ದಬ್ಬಡ್ಕ, ಪೆರಾಜೆ, ಕರಿಕೆ, ಭಾಗಮಂಡಲ ಸೇರಿದಂತೆ ವಿವಿಧ ಕಡೆ 7.45 ಕ್ಕೆ ಭೂಮಿ ಕಂಪಿಸಿದ ಅನುಭವ ಜನರಿಗೆ ಆಗಿದೆ. ಮನೆಯಲ್ಲಿದ್ದ ಪಾತ್ರೆಗಳು ಅಲುಗಾಡಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.