ADVERTISEMENT

ಸುಂಟಿಕೊಪ್ಪ: ಮುಂದುವರಿದ ಕಾಡಾನೆ ಹಾವಳಿ

​ಪ್ರಜಾವಾಣಿ ವಾರ್ತೆ
Published 3 ಜುಲೈ 2024, 15:35 IST
Last Updated 3 ಜುಲೈ 2024, 15:35 IST
ಸುಂಟಿಕೊಪ್ಪ ಸಮೀಪದ ಅತ್ತೂರು ನಲ್ಲೂರು ಗ್ರಾಮ ಪಂಚಾಯಿತಿ ನಿವಾಸಿ ಕಡ್ಲೆ ಮನೆ ರಘುಕುಮಾರ್ ಅವರ ತೋಟಕ್ಕೆ ನುಗ್ಗಿದ ಕಾಡಾನೆಗಳ ಹಿಂಡು ಬಾಳೆ ಗಿಡಗಳನ್ನು ನಾಶಮಾಡಿವೆ
ಸುಂಟಿಕೊಪ್ಪ ಸಮೀಪದ ಅತ್ತೂರು ನಲ್ಲೂರು ಗ್ರಾಮ ಪಂಚಾಯಿತಿ ನಿವಾಸಿ ಕಡ್ಲೆ ಮನೆ ರಘುಕುಮಾರ್ ಅವರ ತೋಟಕ್ಕೆ ನುಗ್ಗಿದ ಕಾಡಾನೆಗಳ ಹಿಂಡು ಬಾಳೆ ಗಿಡಗಳನ್ನು ನಾಶಮಾಡಿವೆ   

ಸುಂಟಿಕೊಪ್ಪ: ಹೋಬಳಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಕಾಡಾನೆಗಳು ಮತ್ತೆ ಕಾಣಿಸಿಕೊಂಡಿದ್ದು, ಆಗಾಗ್ಗೆ ದಾಂಧಲೆ‌ ನಡೆಸಿ ಫಸಲು ಭರಿತ ಬೆಳೆಗಳನ್ನು ತುಳಿದು ತಿಂದು ನಷ್ಟವುಂಟುಮಾಡುತ್ತಿವೆ.

ಸಮೀಪದ ಅತ್ತೂರು ನಲ್ಲೂರು ಗ್ರಾಮದ ಕಡ್ಲೆಮನೆ ರಘುಕುಮಾರ ಎಂಬುವವರ ಮನೆಯ ಸಮೀಪದಲ್ಲಿರುವ ತೋಟಕ್ಕೆ ಆಹಾರ ಅರಸಿ ಬಂದ ಕಾಡಾನೆಗಳ ಹಿಂಡು ಕೃಷಿ ಫಸಲುಗಳನ್ನು ತಿಂದು ಧ್ವಂಸಗೊಳಿಸಿವೆ. ತೋಟದಲ್ಲಿ ಬೆಳೆಸಲಾದ ಬಾಳೆಗಿಡಗಳನ್ನು ಸಂಪೂರ್ಣ ತಿಂದು ನಾಶಪಡಿಸಿವೆ.

ಕಾಡಾನೆಗಳ ಹಿಂಡು ಈ ಭಾಗದಲ್ಲಿಯೇ ತೋಟಗಳಲ್ಲಿಯೇ ಬೀಡು ಬಿಟ್ಟಿದ್ದು. ಈ ಭಾಗದ ಬಹುತೇಕ ತೋಟಗಳಲ್ಲಿ ದಾಳಿ ನಡೆಸುವ ಮೂಲಕ ಕೃಷಿ ಫಸಲುಗಳನ್ನು ದ್ಚಂಸಗೊಳಿಸುತ್ತಿವೆ. ಈ ಭಾಗದಲ್ಲಿ ಅರಣ್ಯ ಇಲಾಖೆಯವರು ಕಾಡಾನೆಗಳನ್ನು ಆಗಿಂದಾಗ್ಗೆ ಕಾಡಿಗೆ ಅಟ್ಟುವ ಕಾರ್ಯಾಚರಣೆ ಮಾಡಿದರೂ ಮರುದಿನ ಮತ್ತೆ ಅದೇ ಸ್ಥಳಗಳಲ್ಲಿ ಪ್ರತ್ಯಕ್ಷವಾಗಿ ಮತ್ತಷ್ಟು ದಾಂಧಲೇ ನೆಡೆಸುತ್ತಿದೆ ಎಂದು ರಘುಕುಮಾರ್ ಆಳಲನ್ನು ತೋಡಿಕೊಂಡಿದ್ದಾರೆ.

ADVERTISEMENT

ಈ ಬಗ್ಗೆ ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು. ಕಾಡಾನೆಗಳನ್ನು ಕಾಡಿಗೆ ಅಟ್ಟುವುದರೊಂದಿಗೆ ಶಾಶ್ವತ ಪರಿಹಾರಕ್ಕೆ ಚಿಂತನೆ ನಡೆಸುವಂತಾಗಬೇಕೆಂದು ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ.

ಸಮೀಪದ ಭೂತನಕಾಡು ರಸ್ತೆಯಲ್ಲಿ ಮಂಗಳವಾರ ರಾತ್ರಿ 8 ಗಂಟೆಯ ಸುಮಾರಿಯಲ್ಲಿ ಕಾಡಾನೆಯೊಂದು ನಿಂತು ಕೆಲ ಕಾಲ ವಾಹನ ಸಂಚಾರಕ್ಕೆ ಅಡ್ಡಿ ಪಡೆಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.