ADVERTISEMENT

ವಿರಾಜಪೇಟೆ | ಕಾಡಾನೆ ಹಾವಳಿ : ಕೃಷಿ ಫಸಲು ನಷ್ಟ

​ಪ್ರಜಾವಾಣಿ ವಾರ್ತೆ
Published 2 ಜುಲೈ 2024, 4:58 IST
Last Updated 2 ಜುಲೈ 2024, 4:58 IST
ವಿರಾಜಪೇಟೆ ಸಮೀಪದ ಒಂದನೇ ರುದ್ರಗುಪ್ಪೆ ಗ್ರಾಮದಲ್ಲಿ ಕಾಡಾನೆ ಕಾಫಿ ತೋಟದೊಳಗೆ ನುಗ್ಗಿ ದಾಂಧಲೆ ನಡೆಸಿದ ಪರಿಣಾಮ ಕೃಷಿ ಫಸಲು ನಷ್ಟಗೊಂಡಿದೆ.
ವಿರಾಜಪೇಟೆ ಸಮೀಪದ ಒಂದನೇ ರುದ್ರಗುಪ್ಪೆ ಗ್ರಾಮದಲ್ಲಿ ಕಾಡಾನೆ ಕಾಫಿ ತೋಟದೊಳಗೆ ನುಗ್ಗಿ ದಾಂಧಲೆ ನಡೆಸಿದ ಪರಿಣಾಮ ಕೃಷಿ ಫಸಲು ನಷ್ಟಗೊಂಡಿದೆ.   

ವಿರಾಜಪೇಟೆ: ಸಮೀಪದ ಒಂದನೇ ರುದ್ರಗುಪ್ಪೆಯಲ್ಲಿ ಕಾಡಾನೆ ಕಾಫಿ ತೋಟದೊಳಗೆ ನುಗ್ಗಿ ದಾಂಧಲೆ ನಡೆಸಿದ ಪರಿಣಾಮ ಅಪಾರ ಪ್ರಮಾಣದಲ್ಲಿ ಫಸಲು ನಷ್ಟವಾಗಿದೆ.

ಸಮೀಪದ ಬಿಟ್ಟಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಒಂದನೇ ರುದ್ರಗುಪ್ಪೆ ಗ್ರಾಮದ ಕಾಫಿ ತೋಟಗಳಲ್ಲಿ ಬೀಡುಬಿಟ್ಟಿದ್ದ ಒಂಟಿ ಸಲಗ ಗ್ರಾಮದ ಎ.ಎಚ್. ಸರಸ್ವತಿ ಮತ್ತು ಟೋಮಿ ಎಂಬುವರ ತೋಟಗಳಿಗೆ ನುಗ್ಗಿ ಕಾಫಿ, ಅಡಿಕೆ ತೆಂಗು, ಬಾಳೆ ಗಿಡಗಳಿಗೆ ಹಾನಿಯುಂಟು ಮಾಡಿದೆ.

ಅಲ್ಲದೆ ವಿದ್ಯುತ್ ಪರಿವರ್ತಕದಿಂದ ಕೊಳವೆ ಬಾವಿಗೆ ಸಂಪರ್ಕ ಕಲ್ಪಿಸುವ ವಿದ್ಯುತ್ ತಂತಿ ತುಂಡರಿಸಿದೆ. ಇದರಿಂದ ವಿದ್ಯುತ್ ಪೂರೈಕೆ ಸ್ಥಗಿತಗೊಂಡಿದೆ. ಕೂಡಲೇ ಈ ಬಗ್ಗೆ ಅರಣ್ಯ ಇಲಾಖೆ ಕ್ರಮಕೈಗೊಳ್ಳುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.