ನಾಪೋಕ್ಲು: ನಾಪೋಕ್ಲು ಬಿಲ್ಲವ ಸಮಾಜದ ವತಿಯಿಂದ ಆ.4ರಂದು ಆಟಿಡೊಂಜಿ ದಿನ- 2024 ಕಾರ್ಯಕ್ರಮವನ್ನು ಇಲ್ಲಿನ ಕೊಡವ ಸಮಾಜದಲ್ಲಿ ಆಯೋಜಿಸಲಾಗಿದೆ ಎಂದು ಬಿಲ್ಲವ ಸಮಾಜದ ಅಧ್ಯಕ್ಷ ಬಿ.ಎಂ ಪ್ರತೀಪ ಹೇಳಿದರು.
ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬಿಲ್ಲವ ಸಮಾಜದ ಸಂಘದ ಉದ್ಘಾಟನೆ ನಡೆಯಲಿದೆ. ಆ ಪ್ರಯುಕ್ತ ರಕ್ತದಾನ ಶಿಬಿರವನ್ನು ಸಮುದಾಯ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಆಯೋಜಿಸಲಾಗಿದೆ. ಬಳಿಕ ಬಿಲ್ಲವ ಸಮಾಜದ ಮಹಾಸಭೆ ನಡೆಯಲಿದೆ. ನಾಪೋಕ್ಲು ಹೋಬಳಿ ಮಟ್ಟದಲ್ಲಿ ಸಮಾಜ ಬಾಂಧವರನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, 11 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದೆ ಎಂದರು.
ಮಧ್ಯಾಹ್ನ 12 ಗಂಟೆಗೆ ಆಟಿ ಮಾಸದಲ್ಲಿ ತಯಾರಿಸುವ ವಿಶೇಷ ಖಾದ್ಯ ಪ್ರದರ್ಶನ ನಡೆಯಲಿದೆ. ನಿರಂತರವಾಗಿ ಸಮಾಜ ಸೇವೆ ಮಾಡುವ ಉದ್ದೇಶದಿಂದ ಸಂಘವನ್ನು ಸ್ಥಾಪಿಸಲಾಗಿದ್ದು, ಕನಿಷ್ಠ 50 ಯುನಿಟ್ ರಕ್ತ ಸಂಗ್ರಹಿಸುವ ಉದ್ದೇಶವನ್ನು ಹೊಂದಿದ್ದೇವೆ. ಮಧ್ಯಾಹ್ನ ಬಿಲ್ಲವ ಸಮಾಜದ ವಾರ್ಷಿಕ ಮಹಾಸಭೆ ನಡೆಯಲಿದ್ದು, ಸಮಾಜದವರಿಗಾಗಿ ಮನರಂಜನೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿಲ್ಲವ ಸಮಾಜದ ಅಧ್ಯಕ್ಷ ಬಿ.ಎಂ ಪ್ರತೀಪ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕ ಎ.ಎಸ್. ಪೊನ್ನಣ್ಣ, ರಕ್ತ ನಿಧಿ ಅಧಿಕಾರಿ ಡಾ. ಕರಂಬಯ್ಯ, ಮಡಿಕೇರಿ ಬಿಲ್ಲವ ಸಮಾಜದ ಅಧ್ಯಕ್ಷೆ ಲೀಲಾವತಿ, ಬಿಜೆಪಿ ಹಿಂದುಳಿದ ವರ್ಗಗಳ ಜಿಲ್ಲಾಧ್ಯಕ್ಷ ಅಪ್ಪು ರವೀಂದ್ರ, ನಾಪೋಕ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷೆ ವನಜಾಕ್ಷಿ, ಪಿಎಸ್ಐ ಈ.ಮಂಜುನಾಥ್, ನೋಟರಿ ವಕೀಲ ದಯಾ ಹೊನ್ನಪ್ಪ, ಮೂರ್ನಾಡು ಭಗವಾನ್ ಬಿಲ್ಡರ್ಸ್ನ ಮಾಲೀಕ ಸುರೇಶ್ ಮುತ್ತಪ್ಪ, ಹಿಂದೂ ಮಲಯಾಳಿ ಸಂಘದ ಅಧ್ಯಕ್ಷ ಅನಿಲ್, ನಿವೃತ ಸೇನಾಧಿಕಾರಿ ಕ್ಯಾಪ್ಟನ್ ಪೂವಪ್ಪ, 50ಕ್ಕೂ ಅಧಿಕ ಬಾರಿ ರಕ್ತದಾನ ಮಾಡಿದ ರಾಮಪ್ಪ ಪೊಲೀಸ್, ಸಿವಿಲ್ ಗುತ್ತಿಗೆದಾರ ಗೋಪಾಲ, ನಿವೃತ್ತ ಪೊಲೀಸ್ ಅಧಿಕಾರಿ ಲಿಂಗಪ್ಪ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿರುವರು ಎಂದರು.
ಪತ್ರಿಕಾಗೋಷ್ಠಿಯಲ್ಲಿ ಬಿಲ್ಲವ ಸಮಾಜದ ಕಾರ್ಯದರ್ಶಿ ರೋಹಿತ್, ಸಂಘಟನಾ ಕಾರ್ಯದರ್ಶಿ ನಾಗರಾಜ್, ಖಜಾಂಚಿ ಬಿ.ಡಿ ದೀಪಕ್, ಸದಸ್ಯರಾದ ಪುನೀತ್, ಸದಸ್ಯ ಬಿ.ಎಸ್ ದಿಲೀಪ್ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.