ಕುಶಾಲನಗರ: ಎಳ್ಳು, ಬೆಲ್ಲ ಹಂಚುವ ಮೂಲಕ ಮಾನವೀಯತೆಯ ಸಂಬಂಧ ಬೆಸೆಯುವ ಉತ್ತರಾಯಣ ಪುಣ್ಯಕಾಲದ ಮಕರ ಸಂಕ್ರಾಂತಿ ಹಬ್ಬವನ್ನು ಪಟ್ಟಣದಲ್ಲಿ ಸೋಮವಾರ ಸಡಗರ, ಸಂಭ್ರಮದಿಂದ ಆಚರಿಸಲಾಯಿತು.
ಹಬ್ಬದ ಅಂಗವಾಗಿ ಪಟ್ಟಣದ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
ರೈತರು ತಮ್ಮ ಜಾನುವಾರುಗಳ ಮೈತೊಳೆದು, ಸಿಂಗರಿಸಿ ಮೆರವಣಿಗೆ ಮಾಡಿ ಮೃಷ್ಟಾನ್ನವನ್ನು ಉಣಬಡಿಸಿ ಸಂತಸಪಟ್ಟರು.
ಮಹಿಳೆಯರು ಮತ್ತು ಮಕ್ಕಳು ಹೊಸ ಉಡುಗೆ ತೊಡುಗೆ ಧರಿಸಿ ಎಳ್ಳು, ಬೆಲ್ಲ ಹಂಚಿ ಶುಭಾಶಯ ವಿನಿಮಯ ಮಾಡಿಕೊಳ್ಳುವ ಮೂಲಕ ಎಳ್ಳು ಬೆಲ್ಲ ತಿಂದು ಒಳ್ಳೆಯ ಮಾತಾಡಿ ಎಂದು ಶುಭ ಹಾರೈಸಿದರು.
ಮನೆಗಳಲ್ಲಿ ಹಬ್ಬದ ವಿಶೇಷವಾದ ಸಿಹಿ ಪೊಂಗಲ್ ಸೇರಿದಂತೆ ವಿವಿಧ ಭಕ್ಷ್ಯ ಭೋಜನಗಳನ್ನು ಸಿದ್ಧಪಡಿಸಿ ದೇವರಿಗೆ ಪೂಜೆ ಸಲ್ಲಿಸಿ ನಂತರ ಒಟ್ಟಾಗಿ ಸವಿದು ಸಂಭ್ರಮಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.