ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಗುರುವಾರ ಮಧ್ಯಾಹ್ನದ ನಂತರ ಭಾರಿ ಪ್ರಮಾಣದಲ್ಲಿ ಮಳೆ ಸುರಿಯುತ್ತಿದ್ದು, ಇಲ್ಲಿನ ಹಾರಂಗಿ ಜಲಾಶಯಕ್ಕೆ ಹರಿದು ಬರುತ್ತಿದ್ದ ನೀರಿನ ಪ್ರಮಾಣ ಕೇವಲ 3 ಗಂಟೆಯಲ್ಲಿ 8,120 ಕ್ಯುಸೆಕ್‌ನಿಂದ 15,640 ಕ್ಯುಸೆಕ್‌ಗೆ ಏರಿಕೆ ಕಂಡಿದೆ. ಇದರಿಂದ ನದಿಗೆ ಬಿಡುತ್ತಿರುವ ನೀರಿನ ಪ್ರಮಾಣವನ್ನು 12 ಸಾವಿರ ಕ್ಯುಸೆಕ್‌ಗೆ ಏರಿಕೆ ಮಾಡಲಾಗಿದೆ.
ಸಂಜೆ 6 ಗಂಟೆಯಲ್ಲಿ ಜಲಾಶಯಕ್ಕೆ 8,120 ಕ್ಯುಸೆಕ್ ನೀರು ಹರಿದು ಬರುತ್ತಿತ್ತು. ರಾತ್ರಿ 9 ಗಂಟೆಯ ಹೊತ್ತಿಗೆ ಇದರ ಪ್ರಮಾಣ 15,640 ಕ್ಯುಸೆಕ್‌ಗೆ ಏರಿಕೆಯಾಗಿದೆ. ಮಳೆಯು ಜೋರು ಗಾಳಿಯೊಂದಿಗೆ ಧಾರಾಕಾರವಾಗಿ ಸುರಿಯುತ್ತಿದ್ದು, ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣ ಏರಿಕೆಯಾಗುತ್ತಲೆ ಇದೆ. ಇದರಿಂದ ನದಿದಡದ ನಿವಾಸಿಗಳಲ್ಲಿ ಆತಂಕ ಎದುರಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.