ಮಡಿಕೇರಿ: ಸುಂಟಿಕೊಪ್ಪ ಸಮೀಪದ ವಿಶೇಷ ಸಾಮರ್ಥ್ಯವುಳ್ಳ ಸ್ವಸ್ಥ, ಶಿಕ್ಷಣ ಮತ್ತು ಪುನರ್ವಸತಿ ಕೇಂದ್ರದ ವಿದ್ಯಾರ್ಥಿಗಳಿಗೆ ಆರೋಗ್ಯ ತಪಾಸಣೆ ಶಿಬಿರ ಈಚೆಗೆ ನಡೆಯಿತು.
ಯೂತ್ ರೆಡ್ ಕ್ರಾಸ್ ಸೊಸೈಟಿ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮತ್ತು ರಾಷ್ಟ್ರೀಯ ವೈದ್ಯಕೀಯ ಸಂಸ್ಥೆ ಕೊಡಗು ವತಿಯಿಂದ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಯೂತ್ ರೆಡ್ ಕ್ರಾಸ್ ಕಾರ್ಯಕ್ರಮ ಅಧಿಕಾರಿ ಡಾ.ಕರುಂಬಯ್ಯ, ಸದಸ್ಯ ಡಾ.ಶಶಾಂಕ, ಘಟಕದ ವಿದ್ಯಾರ್ಥಿ ಕಾರ್ಯದರ್ಶಿ ಡಾ.ಹರಿನಾರಾಯಣ್, 26 ವೈದ್ಯರ ತಂಡದೊಂದಿಗೆ ಸಾಮಾನ್ಯ ದೈಹಿಕ, ವ್ಯವಸ್ಥಿತ ಪರೀಕ್ಷೆ, ದೃಷ್ಟಿ ಮತ್ತು ಶ್ರವಣ ಪರೀಕ್ಷೆಗಳು ಮತ್ತು ಮನರಂಜನಾ ಚಟುವಟಿಕೆಗಳು ಶಾಲೆಯಲ್ಲಿ ನಡೆದವು.
ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಕೊಡಗು ಅಧ್ಯಕ್ಷ ಬಿ.ಕೆ.ರವೀಂದ್ರ ರೈ, ಯೂತ್ ರೆಡ್ ಕ್ರಾಸ್ ಸೊಸೈಟಿ ಕೊಡಗು ಅಧ್ಯಕ್ಷ ಎಂ.ಧನಂಜಯ, ಯೂತ್ ರೆಡ್ ಕ್ರಾಸ್ ಕಾರ್ಯಕ್ರಮದ ಸಂಯೋಜಕ ಎಂ.ಆರ್.ಜಗದೀಶ್, ನ್ಯಾಷನಲ್ ಮೆಡಿಕೋಸ್ ಆರ್ಗನೈಸೇಷನ್‌ನ ಕರ್ನಾಟಕ ದಕ್ಷಿಣ ವಲಯ ಸಹಪ್ರಮುಖ ಡಾ.ಹರಿನಾರಾಯಣ್, ಸ್ವಸ್ಥ ನಿರ್ದೇಶಕಿ ಆರತಿ ಸೋಮಯ್ಯ ಭಾಗವಹಿಸಿದ್ದರು.
ನ್ಯಾಷನಲ್ ಮೆಡಿಕೋಸ್ ಆರ್ಗನೈಸೇಷನ್ ವತಿಯಿಂದ ಸ್ವಸ್ಥದ ವಿಶೇಷ ಚೇತನ ವಿದ್ಯಾರ್ಥಿಗಳಿಗೆ ಸ್ಟೇಷನರಿ ಕಿಟ್‌ಗಳನ್ನು ವಿತರಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.