ADVERTISEMENT

ಕೊಡಗು: ಜಿಲ್ಲೆಗೆ ಆರೋಗ್ಯ ಖಾತೆ ಸಚಿವ ದಿನೇಶ್ ಗುಂಡುರಾವ್ ಭೇಟಿ

​ಪ್ರಜಾವಾಣಿ ವಾರ್ತೆ
Published 23 ಜೂನ್ 2024, 16:24 IST
Last Updated 23 ಜೂನ್ 2024, 16:24 IST
<div class="paragraphs"><p>ದಿನೇಶ್ ಗುಂಡುರಾವ್</p></div>

ದಿನೇಶ್ ಗುಂಡುರಾವ್

   

ಮಡಿಕೇರಿ: ಆರೋಗ್ಯ ಖಾತೆ ಸಚಿವ ದಿನೇಶ್ ಗುಂಡುರಾವ್ ಅವರು ಜೂನ್ 24ರಂದು ಬೆಳಿಗ್ಗೆ 11 ಗಂಟೆಗೆ ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನೂತನ ಡಯಾಲಿಸಿಸ್ ಘಟಕವನ್ನು ಉದ್ಘಾಟಿಸಲಿದ್ದಾರೆ.

ಮಧ್ಯಾಹ್ನ 12.10ಕ್ಕೆ ಹೆಬ್ಬಾಲೆಯ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ. ನಂತರ, 1.30ಕ್ಕೆ ಶಾಸಕ ಡಾ.ಮಂತರ್‌ಗೌಡ ಅವರ ನಿವಾಸಕ್ಕೆ ಭೇಟಿ ನೀಡಿ, 3 ಗಂಟೆಗೆ ಸೋಮವಾರಪೇಟೆ ತಾಲ್ಲೂಕು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.

ADVERTISEMENT

ನಂತರ, 4 ಗಂಟೆಗೆ ಸೋಮವೇಶ್ವರ ದೇಗುಲಕ್ಕೆ ಭೇಟಿ ನೀಡಿ ನಿರ್ಗಮಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.