ADVERTISEMENT

ಕೊಡಗು: ಜಿಲ್ಲೆಯಲ್ಲಿ ಭಾರಿ ಮಳೆ, ಗಾಳಿ ಮುಂದುವರಿಕೆ

​ಪ್ರಜಾವಾಣಿ ವಾರ್ತೆ
Published 26 ಜುಲೈ 2024, 4:46 IST
Last Updated 26 ಜುಲೈ 2024, 4:46 IST
<div class="paragraphs"><p>ವಿರಾಜಪೇಟೆ ತಾಲ್ಲೂಕಿನ ಕಳತ್ಮಾಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡಕ್ಕೆ ಮರ ಬಿದ್ದು&nbsp;ಹಾನಿಯಾಗಿದೆ</p><p></p></div>

ವಿರಾಜಪೇಟೆ ತಾಲ್ಲೂಕಿನ ಕಳತ್ಮಾಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡಕ್ಕೆ ಮರ ಬಿದ್ದು ಹಾನಿಯಾಗಿದೆ

   

– ಪ್ರಜಾವಾಣಿ ಚಿತ್ರ

ADVERTISEMENT

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಭಾರಿ ಗಾಳಿ, ಮಳೆ ಗುರುವಾರ ರಾತ್ರಿ ಇಡಿ ಸುರಿದಿದ್ದು, ಶುಕ್ರವಾರ ಬೆಳಿಗ್ಗೆಯೂ ಮುಂದುವರಿದಿದೆ‌.

ಹಾರಂಗಿಗೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬಂದಿದ್ದರಿಂದ‌ 20 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಬಿಡಲಾಗಿತ್ತು.

ಜೋರು ಗಾಳಿ ಬೀಸುತ್ತಿರುವುದರಿಂದ ವಿರಾಜಪೇಟೆ ತಾಲ್ಲೂಕಿನ ಕಳತ್ಮಾಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡದ ಮೇಲೆ ಮರ ಬಿದ್ದು ಹಾನಿಯಾಗಿದೆ.

ನಾಪೋಕ್ಲು- ಭಾಗಮಂಡಲ ರಸ್ತೆಯಲ್ಲಿ ಒಂದೂವರೆ ಅಡಿ ನೀರು ಹರಿಯುತ್ತಿದೆ.

ಸಿದ್ದಾಪುರ- ವಿರಾಜಪೇಟೆ ರಸ್ತೆಯಲ್ಲಿ ಕಾರಿನ ಮೇಲೆ ಮರ ಬಿದ್ದು ಹಾನಿಯಾಗಿದೆ.

ಜಿಲ್ಲೆಯ ಎಲ್ಲೆಡೆ ಧಾರಾಕಾರವಾಗಿ ಮಳೆ ಸುರಿಯುತ್ತಿರುವುದರಿಂದ ಅಂಗನವಾಡಿಗಳು, ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜಿಲ್ಲಾಡಳಿತ ಶುಕ್ರವಾರ ರಜೆ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.