ಮಡಿಕೇರಿ: ನಗರ ಸೇರಿದಂತೆ ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರಿದಿದ್ದು, ಹವಾಮಾನ ಇಲಾಖೆ ಮತ್ತೆರಡು ದಿನಗಳ ಕಾಲ ರೆಡ್ ಅಲರ್ಟ್ ಘೋಷಿಸಿದೆ.
ಹಲವೆಡೆ ರಸ್ತೆಗಳಲ್ಲಿ ನೀರು ಕಾಲುವೆಯಂತೆ ಹರಿಯುತ್ತಿದೆ. ಮನೆಗಳು ಕುಸಿಯುತ್ತಿವೆ. ಜನಜೀವನ ಅಸ್ತವ್ಯಸ್ತಗೊಂಡಿದೆ.
ಹಾರಂಗಿ ಜಲಾಶಯಕ್ಕೆ ಭಾರಿ ಪ್ರಮಾಣದ ನೀರು ಹರಿದು ಬರುತ್ತಿದ್ದು, ನದಿಗೆ 27,500 ಕ್ಯುಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ಇದರಿಂದ ನದಿದಂಡೆಯ ನಿವಾಸಿಗಳಲ್ಲಿ ಮತ್ತೆ ಪ್ರವಾಹ ಭೀತಿ ಎದುರಾಗಿದೆ.
ಭಾಗಮಂಡಲದಲ್ಲಿ ಮತ್ತೆ ನೀರಿನ ಮಟ್ಟ ಏರಿಕೆಯಾಗಿದೆ. ತ್ರಿವೇಣಿ ಸಂಗಮ ಭರ್ತಿಯಾಗಿ ನೀರು ಭಗಂಡೇಶ್ವರ ಮೆಟ್ಟಿಲು ತಲುಪಿದೆ. ನಾಪೋಕ್ಲು ಹಾಗೂ ಮಡಿಕೇರಿ ರಸ್ತೆಗಳು ಜಲಾವೃತಗೊಂಡಿವೆ.
ಚೆರಿಯಾಪರಂಬುವಿನಲ್ಲಿ ಅಂದಾಜು ನಾಲ್ಕು ಅಡಿ ನೀರು ಇದ್ದು ರಸ್ತೆ ಸಂಚಾರ ಬಂದ್ ಆಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.