ADVERTISEMENT

ಧಾರಾಕಾರ ಮಳೆ: ಪೊನ್ನಂಪೇಟೆ, ವಿರಾಜಪೇಟೆ ಶಾಲೆಗಳಿಗೆ ರಜೆ

​ಪ್ರಜಾವಾಣಿ ವಾರ್ತೆ
Published 26 ಜೂನ್ 2024, 16:10 IST
Last Updated 26 ಜೂನ್ 2024, 16:10 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಮಡಿಕೇರಿ: ಧಾರಾಕಾರವಾಗಿ ಮಳೆ ಸುರಿಯುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಜೂನ್ 27ರಂದು ವಿರಾಜಪೇಟೆ ಹಾಗೂ ಪೊನ್ನಂಪೇಟೆ ತಾಲ್ಲೂಕು ವ್ಯಾಪ್ತಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿ ವಿರಾಜಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಕಾಶ್, ‘ವಿರಾಜಪೇಟೆ ಹಾಗೂ ಪೊನ್ನಂಪೇಟೆ ತಾಲ್ಲೂಕುಗಳಲ್ಲಿ ತೋಡುಗಳು ಹೆಚ್ಚಿದ್ದು, ಅವುಗಳಲ್ಲಿ ಹೆಚ್ಚು ರಭಸದಿಂದ ನೀರು ಹರಿಯುತ್ತಿದೆ. ಮಕ್ಕಳ ಹಿತದೃಷ್ಟಿಯಿಂದ ಜೂನ್ 27ರಂದು ಒಂದು ದಿನದ ಮಟ್ಟಿಗೆ ರಜೆ ಘೋಷಿಸಲಾಗಿದೆ’ ಎಂದು ತಿಳಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.