ಮಡಿಕೇರಿ: ಕೊಡಗು ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಗುರುವಾರ ದಿನವಿಡೀ ಭಾರಿ ಮಳೆ ಸುರಿಯುತ್ತಿದೆ. ಅಲ್ಲಲ್ಲಿ ರಸ್ತೆಗೆ ಮಣ್ಣು ಕುಸಿಯುವುದು, ಮರಗಳು ಬುಡಮೇಲಾಗುವುದು, ವಿದ್ಯುತ್ ಕಂಬಗಳು ಉರುಳುವುದು ಸಾಮಾನ್ಯ ಎನಿಸಿದೆ.
ಈ ಮಧ್ಯೆ ಹವಾಮಾನ ಇಲಾಖೆಯು ಶುಕ್ರವಾರ ಮತ್ತಷ್ಟು ಭಾರಿ ಮಳೆಯ ಮುನ್ಸೂಚನೆ ನೀಡಿ ಜಿಲ್ಲೆಗೆ ಆರೆಂಜ್ ಅಲರ್ಟ್ ನೀಡಿದೆ.
ಇದರಿಂದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿಗಳು, ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜುಲೈ 26ರಂದು ಶುಕ್ರವಾರ ಒಂದು ದಿನದಮಟ್ಟಿಗೆ ರಜೆ ಘೋಷಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.