ADVERTISEMENT

ಕೊಡಗು ಜಿಲ್ಲೆಯ ಹಾಡಿಗಳಲ್ಲಿ ಪಾದ್ರಿಗಳ ಸಂಖ್ಯೆ ಎಷ್ಟು?: ಪ್ರತಾಪಸಿಂಹ ಪ್ರಶ್ನೆ

​ಪ್ರಜಾವಾಣಿ ವಾರ್ತೆ
Published 29 ನವೆಂಬರ್ 2023, 15:41 IST
Last Updated 29 ನವೆಂಬರ್ 2023, 15:41 IST
<div class="paragraphs"><p>ಪ್ರತಾಪಸಿಂಹ</p></div>

ಪ್ರತಾಪಸಿಂಹ

   

ಮಡಿಕೇರಿ: ‘ಕೊಡಗು ಜಿಲ್ಲೆಯ ಹಾಡಿಗಳಲ್ಲಿ ಮತಾಂತರ ಮಾಡಲೆಂದು ಉಳಿದುಕೊಂಡಿರುವ ಪಾದ್ರಿಗಳ ಸಂಖ್ಯೆ ಎಷ್ಟು?’ ಎಂದು ಸಂಸದ ಪ್ರತಾಪಸಿಂಹ ಇಲ್ಲಿ ಬುಧವಾರ ನಡೆದ ‘ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ’ ಸಭೆಯಲ್ಲಿ ಪ್ರಶ್ನಿಸಿದರು.

ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಸಮನ್ವಯ ಅಧಿಕಾರಿ ಹೊನ್ನೇಗೌಡ ಅವರು, ‘ಪಾದ್ರಿಗಳ ಸಂಖ್ಯೆ ಕುರಿತು ಯಾವುದೇ ಸಮೀಕ್ಷೆ ನಡೆದಿಲ್ಲ’ ಎಂದು ಪ್ರತಿಕ್ರಿಯಿಸಿದರು.

ADVERTISEMENT

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರತಾಪಸಿಂಹ, ‘ಕರ್ನಾಟಕದ ಹಣ ತೆಲಂಗಾಣದ ಚುನಾವಣೆಗೆ ಹೋಗುತ್ತಿದೆ ಎಂದು ವಿರಾಜಪೇಟೆಯ ಬಿಜೆಪಿ ಕಾರ್ಯಕರ್ತರೊಬ್ಬರು ಫೇಸ್‌ಬುಕ್‌ ಸ್ಟೇಟಸ್ ಹಾಕಿದರು ಎಂಬ ಕಾರಣಕ್ಕೆ ಅವರಿಂದ ಪೊಲೀಸರು ಮುಚ್ಚಳಿಕೆ ಬರೆಸಿಕೊಂಡಿರುವುದು ಸರಿಯಲ್ಲ. ಒಂದು ವೇಳೆ ಕಾನೂನಿನಲ್ಲಿ ಅದಕ್ಕೆ ಅವಕಾಶವಿದ್ದರೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಂದಲೂ ಮುಚ್ಚಳಿಕೆ ಬರೆಸಿಕೊಳ್ಳಬೇಕಾಗುತ್ತದೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.