ADVERTISEMENT

ತಪ್ಪು ಇಲ್ಲ ಎಂದಾದರೆ ಸಿಬಿಐಗೆ ವಹಿಸಿ: ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್

ರಾಜ್ಯ ಸರ್ಕಾರಕ್ಕೆ ಸವಾಲೆಸೆದ ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್

​ಪ್ರಜಾವಾಣಿ ವಾರ್ತೆ
Published 11 ಜುಲೈ 2024, 14:53 IST
Last Updated 11 ಜುಲೈ 2024, 14:53 IST
ಯದುವೀರ್
ಯದುವೀರ್   

ಮಡಿಕೇರಿ: ‘ಕಾಂಗ್ರೆಸ್‌ ಪಕ್ಷದವರ ತಪ್ಪು ಇಲ್ಲವೆಂದಾದರೆ ವಾಲ್ಮೀಕಿ ಅಭಿವೃದ್ಧಿ ನಿಗಮ ಮತ್ತು ಮುಡಾದಲ್ಲಿ ನಡೆದಿದೆ ಎನ್ನಲಾದ ಹಗರಣಗಳ ತನಿಖೆಯ ಹೊಣೆಯನ್ನು ಸಿಬಿಐಗೆ ವಹಿಸಲಿ’ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್ ಒತ್ತಾಯಿಸಿದರು.

ಇಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಡವರಿಗೆ ನಿವೇಶನ ನೀಡುವ ಉದ್ದೇಶದಿಂದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವನ್ನು ಈ ಹಿಂದೆ ಮೈಸೂರು ಸಂಸ್ಥಾನದಲ್ಲಿ ಸ್ಥಾ‍ಪಿಸಲಾಗಿತ್ತು. ಆದರೆ, ಇಂದು ಶ್ರೀಮಂತರಿಗೆ ನಿವೇಶನ ನೀಡುವ ಪ್ರಾಧಿಕಾರವಾಗಿದೆ’ ಎಂದು ದೂರಿದರು.

‘ರಾಜ್ಯ ಸರ್ಕಾರ ಆಡಳಿತ ನಡೆಸುವಲ್ಲಿ ಸಂಪೂರ್ಣ ವಿಫಲವಾಗಿದೆ. ಹಗರಣಗಳ ತನಿಖೆಯ ಹೊಣೆಯನ್ನು ಸಿಬಿಐಗೆ ವಹಿಸಿ, ಅವರಿಂದ ಕ್ಲೀನ್‌ಚೀಟ್ ಪಡೆದ ನಂತರ ಆಡಳಿತ ನಡೆಸಲಿ’ ಎಂದು ಸಲಹೆ ನೀಡಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.