ಮಡಿಕೇರಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆಯಡಿ ವಿವಿಧ ಇಲಾಖೆಗಳ ಕಾರ್ಯಕ್ರಮಗಳನ್ನು ಆರಂಭದಲ್ಲೇ ಅನುಷ್ಠಾನಗೊಳಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಅವರು ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಎಸ್‍ಸಿಎಸ್‍ಪಿ ಮತ್ತು ಟಿಎಸ್‍ಪಿ ಕಾರ್ಯಕ್ರಮಗಳ ಯೋಜನೆ ಸಂಬಂಧಿಸಿದಂತಹ ಸಭೆಯಲ್ಲಿ ಅವರು ಮಾತನಾಡಿದರು.
ಕಳೆದ ಬಾರಿಯ ವಿವಿಧ ಇಲಾಖೆಯ ಕಾರ್ಯಕ್ರಮಗಳ ಪ್ರಗತಿ ಸಂಬಂಧಿಸಿದಂತೆ ಮಾಹಿತಿ ಪಡೆದ ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಕಳೆದ ವರ್ಷ ಶೇಕಡಾವಾರು ಪ್ರಗತಿ ಸಾಧಿಸಲಾಗಿದ್ದು, ಈ ಬಾರಿಯೂ ಸಹ ಆರಂಭದಿಂದಲೇ ಕಾರ್ಯಕ್ರಮಗಳನ್ನು ಅರ್ಹರಿಗೆ ತಲುಪಿಸುವಂತೆ ಸೂಚನೆ ನೀಡಿದರು.
ಸರ್ಕಾರ ನಿಗದಿ ಮಾಡಿರುವ ಗುರಿಯನ್ನು ತಲುಪಬೇಕು. ಎಸ್‍ಸಿಎಸ್‍ಪಿ ಮತ್ತು ಟಿಎಸ್‍ಪಿ ಕಾರ್ಯಕ್ರಮಗಳನ್ನು ಆದ್ಯತೆ ಮೇಲೆ ಪ್ರಗತಿ ಸಾಧಿಸುವಂತೆಯೂ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಎಸ್.ಧನರಾಜ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶೇಖರ್, ಸಮಗ್ರ ಗಿರಿಜನ ಯೋಜನಾಧಿಕಾರಿ ಎಸ್.ಹೊನ್ನೇಗೌಡ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಸೋಮಸುಂದರ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕ ಡಾ.ವಿಶಾಲ್ ಕುಮಾರ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕ ಎಂ.ಚಂದ್ರಕಾಂತ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಪುಟ್ಟರಾಜು, ಅರಣ್ಯ ಇಲಾಖೆಯ ಭಾಷಾ, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕ ಬಸಪ್ಪ, ಪೌರಾಯುಕ್ತ ವಿಜಯ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.