ಕುಶಾಲನಗರ: ಸಮೀಪದ ಕೂಡಿಗೆ ಕೃಷಿ ಫಾರಂ ಆವರಣದಲ್ಲಿರುವ ಕೊಡಗು ಸೈನಿಕ ಶಾಲೆಯಲ್ಲಿ ಕೆಡೆಟ್ ಚಿಂಗಪ್ಪ ಅನುಮಾನಾಸ್ಪದ ಸಾವಿನ ಕುರಿತು ಪೊಲೀಸ್ ಇಲಾಖೆ ವತಿಯಿಂದ ತನಿಖಾ ಕಾರ್ಯ ಚುರುಕುಗೊಂಡಿದೆ.
ಡಿವೈಎಸ್‌ಪಿ ಮುರುಳೀಧರ್ ನೇತೃತ್ವದಲ್ಲಿ ತನಿಖಾಧಿಕಾರಿ ವೃತ್ತ ನಿರೀಕ್ಷಕ ಕ್ಯಾತೇಗೌಡ ಹಾಗೂ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿ ನವೀನ್ ಗೌಡ ಅವರು ಸೋಮವಾರ ಸೈನಿಕ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸಂಸ್ಥೆ ಮುಖ್ಯಸ್ಥರು ಹಾಗೂ ಶಿಕ್ಷಕರಿಂದ ಮಾಹಿತಿ ಪಡೆದ ತನಿಖಾ ತಂಡ, ಶಾಲೆಯಲ್ಲಿ ಅಳವಡಿಸಿರುವ ಸಿಸಿ ಟಿ.ವಿ ಕ್ಯಾಮೆರಾಗಳ ದೃಶ್ಯಾವಳಿಯನ್ನು ವಶಪಡಿಸಿಕೊಂಡು ಪರಿಶೀಲನೆ ನಡೆಸಿದರು. ಸೈನಿಕ ಶಾಲೆ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.
ಎಸ್‌ಪಿ ಭೇಟಿ: ಕೆಡೆಟ್ ಚಿಂಗಪ್ಪ ಅನುಮಾನಾಸ್ಪದ ಸಾವಿನ ಕುರಿತು ಪೋಷಕರು ಹಾಗೂ ಜನಪ್ರತಿನಿಧಿಗಳು ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಷ್ಠಾಧಿಕಾರಿ ರಾಜೇಂದ್ರ ಪ್ರಸಾದ್ ಭಾನುವಾರ ಸೈನಿಕ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.