ADVERTISEMENT

ವಿರಾಜಪೇಟೆ ಕ್ಷೇತ್ರದಲ್ಲಿ 19ರಿಂದ ಜನಸ್ಪಂದನಾ ಪರ್ವ: ಪೊನ್ನಣ್ಣ

​ಪ್ರಜಾವಾಣಿ ವಾರ್ತೆ
Published 15 ಜೂನ್ 2024, 14:15 IST
Last Updated 15 ಜೂನ್ 2024, 14:15 IST
ಎ.ಎಸ್‌.ಪೊನ್ನಣ್ಣ 
ಎ.ಎಸ್‌.ಪೊನ್ನಣ್ಣ    

ಮಡಿಕೇರಿ: ‘ಜೂನ್ 19ರಿಂದ ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಜನಸ್ಪಂದನಾ ಪರ್ವ ನಡೆಯಲಿದೆ’ ಎಂದು ಶಾಸಕ ಎ.ಎಸ್.ಪೊನ್ನಣ್ಣ ತಿಳಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನಸ್ಪಂದನಾ ಕಾರ್ಯಕ್ರಮಗಳನ್ನು ಕ್ಷೇತ್ರದಲ್ಲಿ ನಡೆಸಲು ಸೂಚನೆ ನೀಡಿದ್ದಾರೆ. 19ರಂದು ವಿರಾಜಪೇಟೆ ಪಟ್ಟಣಕ್ಕೆ ಸಂಬಂಧಿಸಿದಂತೆ ಜನರ ಅಹವಾಲು ಆಲಿಸಲು ಜನಸ್ಪಂದನಾ ಕಾರ್ಯಕ್ರಮ ನಡೆಯಲಿದ್ದು, ನಂತರದಲ್ಲಿ ಪ್ರತಿ ಗ್ರಾಮೀಣ ಭಾಗದಲ್ಲಿ ಕಾರ್ಯಕ್ರಮ ನಡೆಯಲಿದೆ. ಆಯಾ ಭಾಗಕ್ಕೆ ಸಂಬಂಧಿಸಿದ ನಾಗರಿಕರು ಇದರಲ್ಲಿ ಭಾಗವಹಿಸಬಹುದು ಎಂದು ಅವರು ಬೆಂಗಳೂರಿನ ವಿಧಾನಸೌಧದ ಕಚೇರಿಯಲ್ಲಿ ಹೇಳಿದರು.

‘ಜನಸ್ಪಂದನಾ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಸೇರಿದಂತೆ ಎಲ್ಲಾ ಹಿರಿಯ, ಕಿರಿಯ ಅಧಿಕಾರಿಗಳು ಉಪಸ್ಥಿತರಿದ್ದು, ಜನರ ಸಮಸ್ಯೆ ಬಗೆಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು’ ಎಂದು ಮಾಹಿತಿ ನೀಡಿದರು.

ADVERTISEMENT

‘ಜಿಲ್ಲೆಯಲ್ಲಿ ಮುಂಗಾರು ಮಳೆ ಆರಂಭಗೊಂಡಿದ್ದು ಮಳೆಗಾಲವನ್ನು ಸಮರ್ಥವಾಗಿ ಎದುರಿಸಲು ಜಿಲ್ಲಾಡಳಿತಕ್ಕೆ ಈಗಾಗಲೇ ಸೂಚನೆ ನೀಡಲಾಗಿದ್ದು ಅಧಿಕಾರಿಗಳು ಕಟ್ಟೆಚ್ಚರದಿಂದ ಇರುವಂತೆ ನಿರ್ದೇಶನ ನೀಡಲಾಗಿದೆ’ ಎಂದರು.

ಜನಪ್ರತಿನಿಧಿಯಾಗಿ ಅಯ್ಕೆಯಾದವರು ತಮ್ಮ ಭೇಟಿಗೆ ಬರಲಿ ಎಂದು ಕಾಯುವುದರ ಬದಲು ಜನರ ಬಳಿ ತೆರಳಿ ಅವರ ಸಮಸ್ಯೆ ಆಲಿಸಿ, ಬಗೆಹರಿಸಿದರೆ ಮಾತ್ರ ನೈಜ ಪ್ರಜಾಪ್ರಭುತ್ವ ಕಾಣಲು ಸಾಧ್ಯ ಎಂದು ಅವರು ಪ್ರತಿಪಾದಿಸಿದರು ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.