ಮಡಿಕೇರಿ: ಇಲ್ಲಿನ ಮಹದೇವಪೇಟೆಯಲ್ಲಿರುವ ಎಎಲ್‌ಜಿ ಕ್ರೆಸೆಂಟ್ ಶಾಲೆಯಲ್ಲಿ 69ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ನಡೆದ ಜಿಲ್ಲಾ ಮಟ್ಟದ ರಸ ಪ್ರಶ್ನೆ ಸ್ಪರ್ಧೆಯಲ್ಲಿ ಜಿಲ್ಲೆಯ 15 ಶಾಲೆಗಳ 30 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಇವರ ಪೈಕಿ, ಹಾಕತ್ತೂರಿನ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ಎಂ.ಎಸ್.ನಿತ್ಯಶ್ರೀ ಮತ್ತು ಪಿ.ಸಿ ಚೇತನ್ ಪ್ರಥಮ ಸ್ಥಾನ, ನಾಪೋಕ್ಲುವಿನ ಎಕ್ಸೆಲ್ ಎಜುಕೇಶನ್ ಶಾಲೆಯ ಟಿ.ಆರ್.ಸುಮಂತ್ ಮತ್ತು ದರ್ಶ ದೇಶಮ್ಮ ದ್ವಿತೀಯ ಹಾಗೂ ರಾಫೆಲ್ಸ್ ವಿದ್ಯಾಸಂಸ್ಥೆ ನಾಪೋಕ್ಲು ಶಾಲೆಯ ವಿದ್ಯಾರ್ಥಿಗಳಾದ ಮೆಹರೂಫ್ ಮತ್ತು ಸಲ್ಮಾನ್ ಫಾರಿಸ್ ತೃತೀಯ ಸ್ಥಾನ ಪಡೆದುಕೊಂಡರು.
ಮೊದಲ ಸುತ್ತಿನಲ್ಲಿ ಇಬ್ಬರು ವಿದ್ಯಾರ್ಥಿಗಳ 8 ತಂಡವನ್ನು ಆಯ್ಕೆಗೊಳಿಸಲಾಯಿತು. ಹತ್ತು ಸುತ್ತುಗಳಲ್ಲಿ ಸ್ಪರ್ಧೆಗಳು ನಡೆದವು.
ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಎ.ಎಲ್.ಜಿ ಕ್ರೆಸೆಂಟ್ ಶಾಲೆ, ಕೊಡಗು ಬ್ಯಾರಿ ವೆಲ್ಫೇರ್ ಟ್ರಸ್ಟ್ ಹಾಗೂ ಕೊಡಗು ಜಿಲ್ಲಾ ಮಹಿಳಾ ಬರಹಗಾರರ ಸಂಘ್ಗಶದ ಮಡಿಕೇರಿಯ ಕ್ರೆಸೆಂಟ್ ಶಾಲಾ ಸಭಾಂಗಣದಲ್ಲಿ ಈ ಕಾರ್ಯಕ್ರಮ ಆಯೋಜನೆಗೊಂಡಿತ್ತು.
ಶಾಲಾ ವಿದ್ಯಾರ್ಥಿಗಳಿಂದ ಕನ್ನಡ ಗೀತ ಗಾಯನ ಕವನ ವಾಚನ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಹಿರಿಯ ಸಾಹಿತಿ ಬಿ.ಎ.ಶಂಷುದ್ದೀನ್ ರಸಪ್ರಶ್ನೆ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಸ್ಪರ್ಧಿಸಿದ 8 ತಂಡಗಳಿಗೆ ನದಿಗಳಾದ ಶರಾವತಿ, ಗೋದಾವರಿ, ಭದ್ರಾ, ಕನ್ನಿಕೆ, ಕಾವೇರಿ, ತುಂಗಾ, ಕೃಷ್ಣ, ಭೀಮ ಹೀಗೆ ನದಿಗಳ ಹೆಸರನ್ನು ಇಡುವ ಮೂಲಕ ಕಾರ್ಯಕ್ರಮಕ್ಕೆ ಮೆರಗು ತಂದುಕೊಟ್ಟರು.
ಶಾಲೆಯ ಹಿರಿಯ ಶಿಕ್ಷಕಿ ಸುಲ್ಹತ್ ನಿರೂಪಿಸಿದರು. ಕೊಡಗು ಬ್ಯಾರಿ ವೆಲ್ಫೇರ್ ಟ್ರಸ್ಟ್ ಅಧ್ಯಕ್ಷ ಎಸ್.ಐ.ಮುನೀರ್ ಅಹಮದ್ ಸ್ವಾಗತಿಸಿದರು. ಕೋಶಾಧಿಕಾರಿ ಸಂಪತ್ ಕುಮಾರ್ ವಂದಿಸಿದರು.
ಎಎಲ್‌ಜಿ ಕ್ರೆಸೆಂಟ್ ಶಾಲೆಯ ಅಧ್ಯಕ್ಷ ನಿಝಾಮುದ್ದೀನ್ ಸಿದ್ದೀಖಿ, ಉಪಾದ್ಯಕ್ಷ ಅನೀಸ್ ಜವಾಹರ್, ನಿರ್ದೇಶಕ ಉಮ್ಮರ್ ಚಡಖಾನ್, ಕೊಡಗು ಬ್ಯಾರಿ ವೆಲ್ಫೇರ್ ಟ್ರಸ್ಟ್‌ನ ಅಧ್ಯಕ್ಷ ಎಸ್.ಐ.ಮುನೀರ್ ಅಹಮದ್, ಕೊಡಗು ಜಿಲ್ಲಾ ಮಹಿಳಾ ಬರಹಗಾರರ ಸಂಘದ ಅಧ್ಯಕ್ಷೆ ಪುದಿಯನೆರವನ ರೇವತಿ ರಮೇಶ್, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷೆ ಕಡ್ಲೇರ ತುಳಸಿ ಮೋಹನ್, ಕೋಶಾಧಿಕಾರಿ ಸಂಪತ್ ಕುಮಾರ್, ಸಾಹಿತಿಗಳಾದ ಬೈತಡ್ಕ ಜಾನಕಿ, ಗೌರಮ್ಮ ಮಾದಮ್ಮಯ್ಯ, ಭಾರತಿ ರಮೇಶ್, ಕಟ್ಟರ್ತನ ಲಲಿತ ಅಯ್ಯಪ್ಪ, ಚೊಕ್ಕಾಡಿ ಪ್ರೇಮ ರಾಘವಯ್ಯ, ರಾಧಾ ಪೊನ್ನಪ್ಪ ಶರೀಫ್ ಭಾಗವಹಿಸಿದ್ದರು.
ಮಕ್ಕಳಿಗೆ ಕನ್ನಡ ನಾಡು ನುಡಿಯ ವಿಚಾರ ತಿಳಿಯಬೇಕು ಕನ್ನಡ ಗೀತೆಗಳನ್ನು ಹಾಡುವ ಮೂಲಕ ಅದರ ಅರಿವು ಅವರಿಗೆ ಮೂಡಬೇಕು ಎಂದು ಈ ಕಾರ್ಯಕ್ರಮ ಆಯೋಜಿಸಲಾಗಿದೆ.
-ಎಂ.ಪಿ.ಕೇಶವ ಕಾಮತ್ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ.
ಎರಡು ಸಾವಿರ ವರ್ಷಗಳಿಗೂ ಇತಿಹಾಸ ಹೊಂದಿರುವ ಕನ್ನಡ ಭಾಷೆ ನಾಡು ನುಡಿ ಅತಿ ಉತ್ಕೃಷ್ಠವಾದದ್ದು. ಕನ್ನಡ ಸಾಹಿತ್ಯ ಅತ್ಯುನ್ನತ ಪರಂಪರೆ ಹೊಂದಿದೆ
-ಎಂ.ಬಿ ನಾಸಿರ್ ಅಹಮದ್ ಕೊಡಗು ಬ್ಯಾರಿ ವೆಲ್ಫೇರ್ ಟ್ರಸ್ಟ್‌ನ ಉಪಾಧ್ಯಕ್ಷ.
ವಿದ್ಯಾರ್ಥಿಗಳಿಗೆ ಈ ರೀತಿಯ ಒಂದು ಉತ್ತಮವಾದ ಕಾರ್ಯಕ್ರಮದಿಂದ ಕನ್ನಡ ನಾಡು ನುಡಿ ಪರಿಚಯ ಸಿಗುತ್ತಿದೆ. ಸಾಹಿತ್ಯ ಪರಿಷತ್ತಿಗೆ ಧನ್ಯವಾದ.
- ಜಿ.ಎಚ್.ಹನೀಫ್ ಎಎಲ್‌ಜಿ ಕ್ರೆಸೆಂಟ್ ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.