ADVERTISEMENT

ಮಡಿಕೇರಿ: ಕನ್ನಡದ ಉಳಿವಿಗೆ ಎಲ್ಲರೂ ಕೈಜೋಡಿಸಲು ಕರೆ

​ಪ್ರಜಾವಾಣಿ ವಾರ್ತೆ
Published 7 ನವೆಂಬರ್ 2024, 4:29 IST
Last Updated 7 ನವೆಂಬರ್ 2024, 4:29 IST
ಕೊಡಗು ಜಿಲ್ಲಾ ಮರಾಠ ಮರಾಟಿ ಸಮಾಜ ಸೇವಾ ಸಂಘದ ವತಿಯಿಂದ ನಡೆದ ಕನ್ನಡ ರಾಜ್ಯೋತ್ಸವದ ಧ್ವಜಾರೋಹಣವನ್ನು ಎಂ.ಟಿ.ದೇವಪ್ಪ ನೆರವೇರಿಸಿದರು. ಪರಮೇಶ್ವರ್, ದೇವಕಿ.ಜಿ.ಆರ್.ನಾಯ್ಕ್, ಗುರುವಪ್ಪ, ವೆಂಕಪ್ಪ ಭಾಗವಹಿಸಿದ್ದರು
ಕೊಡಗು ಜಿಲ್ಲಾ ಮರಾಠ ಮರಾಟಿ ಸಮಾಜ ಸೇವಾ ಸಂಘದ ವತಿಯಿಂದ ನಡೆದ ಕನ್ನಡ ರಾಜ್ಯೋತ್ಸವದ ಧ್ವಜಾರೋಹಣವನ್ನು ಎಂ.ಟಿ.ದೇವಪ್ಪ ನೆರವೇರಿಸಿದರು. ಪರಮೇಶ್ವರ್, ದೇವಕಿ.ಜಿ.ಆರ್.ನಾಯ್ಕ್, ಗುರುವಪ್ಪ, ವೆಂಕಪ್ಪ ಭಾಗವಹಿಸಿದ್ದರು   

ಮಡಿಕೇರಿ: ಕೊಡಗು ಜಿಲ್ಲಾ ಮರಾಠ, ಮರಾಟಿ ಸಮಾಜ ಸೇವಾ ಸಂಘದ ವತಿಯಿಂದ ಕರ್ನಾಟಕ ರಾಜ್ಯೋತ್ಸವವನ್ನು  ತಾಳತ್ತಮನೆಯ ಸಂಘದ ಕಚೇರಿಯಲ್ಲಿ ಈಚೆಗೆ ಆಚರಿಸಲಾಯಿತು.

ಸಂಘದ ಅಧ್ಯಕ್ಷ ಎಂ.ಎಂ. ಪರಮೇಶ್ವರ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದ ಧ್ವಜಾರೋಹಣವನ್ನು ಸಂಘದ ಸಂಘಟನಾ ಕಾರ್ಯದರ್ಶಿ ಎಂ.ಟಿ. ದೇವಪ್ಪ ನೆರವೇರಿಸಿದರು.

ಈ ವೇಳೆ ಮಾತನಾಡಿದ ಸಂಘದ ಅಧ್ಯಕ್ಷ ಎಂ.ಎಂ. ಪರಮೇಶ್ವರ್, ‘ಕನ್ನಡ ಭಾಷೆ ಸಂಸ್ಕೃತಿ ಉಳಿವಿಗೆ ಎಲ್ಲರೂ ಕೈಜೋಡಿಸಬೇಕು. ಮನೆಯಲ್ಲಿ ಮಕ್ಕಳಿಗೂ ಕನ್ನಡ ಕಲಿಸುವ ಮೂಲಕ ಕನ್ನಡ ಭಾಷೆ ಬೆಳೆಸಬೇಕು. ಪ್ರತಿನಿತ್ಯ ಕನ್ನಡ ಬಳಕೆ ಮೂಲಕ ಕನ್ನಡ ಉಳಿಸಿ ಬೆಳೆಸಲು ಕನ್ನಡಿಗರು ಸದಾ ಬದ್ಧರಾಗಬೇಕು’ ಎಂದು ಹೇಳಿದರು.

ADVERTISEMENT

ನ.9 ಮತ್ತು 10ರಂದು ಮೂಡಬಿದ್ರೆಯಲ್ಲಿ ನಡೆಯಲಿರುವ ಕರಾವಳಿ ಮರಾಠಿ ಸಮಾವೇಶಕ್ಕೆ ಜಿಲ್ಲೆಯಿಂದ 500ಕ್ಕೂ ಅಧಿಕ ಜನ ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದರು.

ಜಿಲ್ಲಾ ಮರಾಠ ಮರಾಟಿ ಸಮಾಜ ಸೇವಾ ಸಂಘದ ಉಪಾಧ್ಯಕ್ಷೆ ದೇವಕಿ.ಜಿ.ಆರ್. ನಾಯ್ಕ್, ಕಟ್ಟಡ ಸಮಿತಿ ಅಧ್ಯಕ್ಷ ಎಂ.ಟಿ. ಗುರುವಪ್ಪ, ಮೊಣ್ಣಂಗೇರಿ ಉಪಸಮಿತಿ ಅಧ್ಯಕ್ಷ ವೆಂಕಪ್ಪ, ಮುಖಂಡರಾದ ಪೂವಪ್ಪ, ಸುರೇಶ್, ನರಸಿಂಹ ಭಾಗವಹಿಸಿದ್ದರು. ಸಂಘದ ಕಾರ್ಯದರ್ಶಿ ಹೂವಮ್ಮ ಸ್ವಾಗತಿಸಿದರೆ, ಮಹಿಳಾ ವೇದಿಕೆ ಅಧ್ಯಕ್ಷೆ ರತ್ನ ಮಂಜರಿ ವಂದಿಸಿದರು ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.