ಮಡಿಕೇರಿ: ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಶುಕ್ರವಾರ ಇಲ್ಲಿ ಸಂವಾದ ನಡೆಸಿದರು.
ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳಡಿ ಸೌಲಭ್ಯಗಳನ್ನು ಪಡೆದವರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.
2018ರ ಭೂಕುಸಿತದಲ್ಲಿ ಮನೆ ಹಾಗೂ ಪತಿಯನ್ನು ಕಳೆದುಕೊಂಡ ಯಶೋದಾ ಮಾತನಾಡಿ, ಇಷ್ಟು ದಿನ ನೆಂಟರ ಮನೆಯಲ್ಲಿ ಇದ್ದೆವು. ಈಗ ಸರ್ಕಾರ ಮನೆ ಕಟ್ಟಿಸಿಕೊಟ್ಟಿದೆ ಎಂದರು.
ಸರ್ಕಾರದ ವಿವಿಧ ಯೋಜನೆಗಳ ಸದ್ಬಳಕೆ ಮಾಡಿಕೊಳ್ಳಬೇಕು ಹಾಗೂ ಇತರರಿಗೂ ಈ ಕುರಿತು ಅರಿವು ಮಾಡಿಸಬೇಕು ಎಂದು ರಾಜ್ಯಪಾಲರು ತಿಳಿಸಿದರು.
ಈ ವೇಳೆ ಸಾಮಾಜಿಕ ಕಾರ್ಯಕರ್ತ ಸತ್ಯ ಕರ್ಕೇರ ಅವರು ಮಾತನಾಡಲು ಅವಕಾಶ ಕೋರಿದರು. ಆದರೆ ಅಧಿಕಾರಿಗಳು ಅವಕಾಶ ಕೊಡಲಿಲ್ಲ. ತಮ್ಮ ಮನವಿಯನ್ನು ಲಿಖಿತವಾಗಿ ಜಿಲ್ಲಾಧಿಕಾರಿಗೆ ಕೊಡಿ ಎಂದು ರಾಜ್ಯಪಾಲರು ಸೂಚಿಸಿ ಹೊರಟರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸತ್ಯ ಕರ್ಕೇರ ಪ್ರಾಕೃತಿಕ ವಿಕೋಪ ಸಂಭವಿಸಿ ಐದು ವರ್ಷಗಳಾದರೂ ಕೂಡ ಕೊಡಗಿನ ಬಹುತೇಕರಿಗೆ ಇನ್ನೂ ಮನೆಗಳು ಸಿಕ್ಕಿಲ್ಲ. ಕೊಡಗಿನಲ್ಲಿ ಸುಸಜ್ಜಿತ ಆಸ್ಪತ್ರೆಯೂ ಇಲ್ಲ. ಈ ಎರಡು ಸಂಗತಿಗಳನ್ನು ರಾಜ್ಯಪಾಲರ ಗಮನಕ್ಕೆ ತರಬೇಕಿತ್ತು. ಆದರೆ, ಅಧಿಕಾರಿಗಳು ಅವಕಾಶ ಕೊಡಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.