ಮಡಿಕೇರಿ: ಬಿಳಿಗೇರಿ ಹಾಗೂ ಅರ್ವತೋಕ್ಲು ಪ್ಲಾಂಟರ್ಸ್ ಕ್ಲಬ್ ವತಿಯಿಂದ 4ನೇ ವರ್ಷದ ಹಿಂದೂ ಸಮಾಜ ಬಾಂಧವರಿಗಾಗಿ ಮುಕ್ತ ಕೆಸರುಗದ್ದೆ ಕ್ರೀಡಾಕೂಟ ಜುಲೈ 13 ಮತ್ತು 14ರಂದು ಬಿಳಿಗೇರಿ, ಅರ್ವತೋಕ್ಲು ಗ್ರಾಮದ ತುಂತಜ್ಜೆ ಕುಟುಂಬಸ್ಥರ ಗದ್ದೆಯಲ್ಲಿ ನಡೆಯಲಿದೆ.
ಈ ಕ್ರೀಡಾಕೂಟದಲ್ಲಿ ಕ್ರಿಕೆಟ್, ಓಟದ ಸ್ಪರ್ಧೆ, ವಾಲಿಬಾಲ್, ಹಗ್ಗಜಗ್ಗಾಟ, ತೆಂಗಿನಕಾಯಿಗೆ ಗುಂಡುಹೊಡೆಯುವ ಸ್ಪರ್ಧೆ ಏರ್ಪಡಿಸಲಾಗಿದೆ. ಮಹಿಳೆಯರಿಗೆ ವಿಶೇಷ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಕ್ಲಬ್ ಅಧ್ಯಕ್ಷ ಕುಡೆಕಲ್ ಅರವಿಂದ್ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಕ್ಲಬ್ ಕಾರ್ಯದರ್ಶಿ ದಂಬೆಕೋಡಿ ದರ್ಶನ್ ಮಾತನಾಡಿ, ಜುಲೈ 13ರಂದು ಕ್ರಿಕೆಟ್ ಪಂದ್ಯಾವಳಿ ನಡೆಯಲಿದ್ದು, ತಂಡಗಳ ನೋಂದಣಿಗೆ ಜುಲೈ 11 ಕೊನೆ ದಿನ. 14 ರಂದು ಉಳಿದ ಎಲ್ಲಾ ಕ್ರೀಡಾಕೂಟಗಳು ನಡೆಯಲಿವೆ. ಆಸಕ್ತರು 9945855974, 9481431122 ಸಂಪರ್ಕಿಸಬಹುದು ಎಂದು ಮನವಿ ಮಾಡಿದರು.
13 ರಂದು ಬೆಳಿಗ್ಗೆ 9 ಗಂಟೆಗೆ ನಡೆಯುವ ಉದ್ಘಾಟನಾ ಕಾರ್ಯಕ್ರಮದಲ್ಲಿ ಗ್ರಾಮದ ತುಂತಜ್ಜೆ ಕುಟುಂಬದ ಕೃಷಿಕರಾದ ಚಂದ್ರಶೇಖರ್, ಜನಾರ್ಧನ, ರಂಜಿತ್, ಧರ್ಮಾವತಿ ಮಾಜಿ ಕ್ಯಾಪ್ಟನ್ ದಯಾನಂದ್, ಪೆರಾತ ಕ್ಲಬ್ ಅಧ್ಯಕ್ಷ ಬಾಲಾಡಿ ಪ್ರತಾಪ್, ಪ್ಲಾಂಟರ್ಸ್ ಕ್ಲಬ್ ಅಧ್ಯಕ್ಷ ಕುಡೆಕಲ್ ಅರವಿಂದ್ ಪಾಲ್ಗೊಳ್ಳಲಿದ್ದಾರೆ.
14 ರಂದು ಸಂಜೆ 4.30ಕ್ಕೆ ಪ್ಲಾಂಟರ್ಸ್ ಕ್ಲಬ್ ಅಧ್ಯಕ್ಷ ಕುಡೆಕಲ್ ಅರವಿಂದ್ ಅಧ್ಯಕ್ಷತೆಯಲ್ಲಿ ಸಮಾರೋಪ ಸಮಾರಂಭ ನಡೆಯಲಿದ್ದು, ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕರಾದ ಎ.ಎಸ್.ಪೊನ್ನಣ್ಣ, ಡಾ.ಮಂತರ್‌ಗೌಡ, ಬಿಜೆಪಿ ಮುಖಂಡ ಕೆ.ಜಿ.ಬೋಪಯ್ಯ, ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ, ಮೇಕೇರಿ ಗ್ರಾಮ ಪಂಚಾಯಿತಿ ಅಧ್ಯಕ್ಷ ರಕ್ಷಿತ್ ಪೂಜಾರಿರ, ಯುವ ಒಕ್ಕೂಟದ ತಾಲ್ಲೂಕು ಅಧ್ಯಕ್ಷ ಬಾಲಾಡಿ ದಿಲೀಪ್ ಕುಮಾರ್ ಪಾಲ್ಗೊಳ್ಳಲಿದ್ದಾರೆ. ಇದೇ ಸಂದರ್ಭದಲ್ಲಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಆಟಗಾರ್ತಿ ತಾತಪಂಡ ಜ್ಯೋತಿ ಸೋಮಯ್ಯರನ್ನು ಸನ್ಮಾನಿಸಲಾಗುವುದು ಎಂದು ತಿಳಿಸಿದರು.
ಕ್ಲಬ್‌ನ ಖಜಾಂಚಿ ಕಾಳೆಯಂಡ ಮಂಜುನಾಥ್, ನಿರ್ದೇಶಕ ಬಾಳಾಡಿ ಮನೋಜ್ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.