ADVERTISEMENT

ಕೋವಿಡ್: ಕೇರಳ ಗಡಿಯಲ್ಲಿ ತಪಾಸಣೆ ಆರಂಭ

​ಪ್ರಜಾವಾಣಿ ವಾರ್ತೆ
Published 18 ಡಿಸೆಂಬರ್ 2023, 23:30 IST
Last Updated 18 ಡಿಸೆಂಬರ್ 2023, 23:30 IST
<div class="paragraphs"><p>ಕೊಡಗು ಜಿಲ್ಲೆಯ ವಿರಾಜಪೇಟೆ ಸಮೀಪದ ಪೆರುಂಬಾಡಿ ಚೆಕ್‌ಪೋಸ್ಟ್‌ನಲ್ಲಿ ಕೇರಳ ರಾಜ್ಯದಿಂದ ಜಿಲ್ಲೆ ಪ್ರವೇಶಿಸುವ ಪ್ರಯಾಣಿಕರ ಆರೋಗ್ಯವನ್ನು ಸೋಮವಾರ ಆರೋಗ್ಯ ಇಲಾಖೆ ಸಿಬ್ಬಂದಿ ‍ಪರೀಕ್ಷಿಸಿದರು</p></div>

ಕೊಡಗು ಜಿಲ್ಲೆಯ ವಿರಾಜಪೇಟೆ ಸಮೀಪದ ಪೆರುಂಬಾಡಿ ಚೆಕ್‌ಪೋಸ್ಟ್‌ನಲ್ಲಿ ಕೇರಳ ರಾಜ್ಯದಿಂದ ಜಿಲ್ಲೆ ಪ್ರವೇಶಿಸುವ ಪ್ರಯಾಣಿಕರ ಆರೋಗ್ಯವನ್ನು ಸೋಮವಾರ ಆರೋಗ್ಯ ಇಲಾಖೆ ಸಿಬ್ಬಂದಿ ‍ಪರೀಕ್ಷಿಸಿದರು

   

ವಿರಾಜಪೇಟೆ (ಕೊಡಗು ಜಿಲ್ಲೆ): ನೆರೆಯ ಕೇರಳದಲ್ಲಿ ಕೋವಿಡ್ ಪ್ರಕರಣಗಳು ನಿರಂತರವಾಗಿ ಹೆಚ್ಚುತ್ತಿರುವುದರಿಂದ ಗಡಿ ಪ್ರದೇಶವಾದ ಪೆರುಂಬಾಡಿ ಚೆಕ್‌ಪೋಸ್ಟ್‌ನಲ್ಲಿ ಸೋಮವಾರ ಪ್ರಯಾಣಿಕರ ಆರೋಗ್ಯ ತಪಾಸಣೆ ಆರಂಭಿಸಲಾಯಿತು.

ಕೇರಳದಿಂದ ಬರುವ ಖಾಸಗಿ ವಾಹನಗಳನ್ನು ತಡೆದು ಪ್ರಯಾಣಿಕರ ಆರೋಗ್ಯ ತಪಾಸಣೆ ನಡೆಸಲಾಯಿತು.

ADVERTISEMENT

ಆರೋಗ್ಯ ನಿರೀಕ್ಷಣಾಧಿಕಾರಿ ಚಿರಂಜೀವಿ ಪ್ರತಿಕ್ರಿಯಿಸಿ, ‘ಇಲಾಖೆಯ ಸೂಚನೆಯಂತೆ ತಪಾಸಣೆ ನಡೆಸಲಾಗುತ್ತಿದೆ. ಸೋಂಕಿನ ಲಕ್ಷಣ ಕಂಡುಬಂದಲ್ಲಿ ಅವರಿಗೆ ವಿರಾಜಪೇಟೆಯ ಸರ್ಕಾರಿ ಆಸ್ಪತ್ರೆಯಲ್ಲಿ ಪರೀಕ್ಷೆ ನಡೆಸಲಾಗುತ್ತದೆ. ನಂತರ ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾ ಆಸ್ವತ್ರೆಗೆ ಕಳಿಸಲಾಗುತ್ತದೆ. ಇಲ್ಲಿಯವರೆಗೆ ನಡೆದ ತಪಾಸಣೆಯ ಸಂದರ್ಭ ಯಾರಿಗೂ ಸೋಂಕಿನ ಲಕ್ಷಣ ಕಂಡುಬಂದಿಲ್ಲ’ ಎಂದು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.