ADVERTISEMENT

ಬಿಜೆಪಿ ಪ್ರತಿಭಟನೆ ಮಾಡುವುದನ್ನು ಬಿಟ್ಟು ಪ್ರಧಾನಿ ಗಮನ ಸೆಳೆಯಲಿ- ಬೋಸರಾಜು

​ಪ್ರಜಾವಾಣಿ ವಾರ್ತೆ
Published 25 ಸೆಪ್ಟೆಂಬರ್ 2023, 7:42 IST
Last Updated 25 ಸೆಪ್ಟೆಂಬರ್ 2023, 7:42 IST
ಎನ್. ಎಸ್. ಬೋಸರಾಜು 
ಎನ್. ಎಸ್. ಬೋಸರಾಜು    

ಮಡಿಕೇರಿ: ಕಾವೇರಿ ವಿವಾದ ಕುರಿತು ಬಿಜೆಪಿ ಪ್ರತಿಭಟನೆ ಮಾಡುವುದನ್ನು ಬಿಟ್ಟು ಪ್ರಧಾನಮಂತ್ರಿ ಅವರ ಗಮನ ಸೆಳೆಯಬೇಕು ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಬೋಸರಾಜು ತಿಳಿಸಿದರು.

ವಿಧಾನಸಭಾ ಚುನಾವಣೆ ವೇಳೆ ಪದೆ ಪದೇ ರಾಜ್ಯಕ್ಕೆ ಬಂದಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಈಗ ರಾಜ್ಯದ ಸಮಸ್ಯೆ ಕುರಿತು ನಿರ್ಲಕ್ಷ್ಯ ವಹಿಸಿದ್ದಾರೆ. ಕೂಡಲೇ ಅವರು ಕರ್ನಾಟಕ, ತಮಿಳುನಾಡು ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆದು, ಸುಪ್ರೀಂ ಕೋರ್ಟ್ ಹೊರಗೆ ವಿವಾದ ಇತ್ಯರ್ಥಪಡಿಸಬೇಕು ಎಂದು ಇಲ್ಲಿ ಸೋಮವಾರ ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದರು.

ರಾಜ್ಯದಲ್ಲಿ ಅತ್ಯಧಿಕ ಸಂಖ್ಯೆಯಲ್ಲಿ ಬಿಜೆಪಿ ಸಂಸದರೇ ಇದ್ದಾರೆ. ಕೂಡಲೆ ಅವರು ಪ್ರಧಾನಿಯವರ ಗಮನ ಸೆಳೆಯುವ ಕೆಲಸ ಮಾಡಬೇಕು ಎಂದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.