ADVERTISEMENT

ಮಡಿಕೇರಿ: ಭಾಗಮಂಡಲ, ಶಾಂತಳ್ಳಿಯಲ್ಲಿ ಮಳೆ

​ಪ್ರಜಾವಾಣಿ ವಾರ್ತೆ
Published 5 ಜುಲೈ 2024, 4:02 IST
Last Updated 5 ಜುಲೈ 2024, 4:02 IST
ಮಡಿಕೇರಿ ಸಮೀಪದ ಅಬ್ಬಿ ಜಲಪಾತ ಧುಮ್ಮಿಕ್ಕುತ್ತಿದ್ದು, ಪ್ರವಾಸಿಗರನ್ನು ಸೂಜಿಗಲ್ಲಿನಂತೆ ಸೆಳೆಯುತ್ತಿದೆ
ಪ್ರಜಾವಾಣಿ ಚಿತ್ರ/ರೆಜಿತ್‌ಕುಮಾರ್ ಗುಹ್ಯ
ಮಡಿಕೇರಿ ಸಮೀಪದ ಅಬ್ಬಿ ಜಲಪಾತ ಧುಮ್ಮಿಕ್ಕುತ್ತಿದ್ದು, ಪ್ರವಾಸಿಗರನ್ನು ಸೂಜಿಗಲ್ಲಿನಂತೆ ಸೆಳೆಯುತ್ತಿದೆ ಪ್ರಜಾವಾಣಿ ಚಿತ್ರ/ರೆಜಿತ್‌ಕುಮಾರ್ ಗುಹ್ಯ   

ಮಡಿಕೇರಿ: ಕೊಡಗು ಜಿಲ್ಲೆಯ ಬಹುತೇಕ ಹೋಬಳಿಗಳಲ್ಲಿ ಬುಧವಾರ ರಾತ್ರಿಯಿಂದ ಗುರುವಾರ ಬೆಳಿಗ್ಗೆಯವರೆಗೂ ಮಳೆ ಸುರಿದಿದೆ. ಭಾಗಮಂಡಲ, ಶಾಂತಳ್ಳಿ, ಮಡಿಕೇರಿಯಲ್ಲಿ ಬಿರುಸಾಗಿದ್ದರೆ, ಉಳಿದೆಡೆ ಸಾಧಾರಣವಾಗಿತ್ತು.

ಬುಧವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಮಡಿಕೇರಿ ತಾಲ್ಲೂಕಿನ ಭಾಗಮಂಡಲ ಹಾಗೂ ಸೋಮವಾರಪೇಟೆ ತಾಲ್ಲೂಕಿನ ಶಾಂತಳ್ಳಿ ಹೋಬಳಿ ವ್ಯಾಪ್ತಿಗಳಲ್ಲಿ ತಲಾ 10 ಸೆಂ.ಮೀ ಮಳೆಯಾಗಿದೆ. ಉಳಿದಂತೆ, ಪೊನ್ನಂಪೇಟೆ ತಾಲ್ಲೂಕಿನ ಹುದಿಕೇರಿ ಹೋಬಳಿಯಲ್ಲಿ 9, ಮಡಿಕೇರಿ ಹಾಗೂ ಸಂಪಾಜೆಯಲ್ಲಿ ತಲಾ 8, ನಾಪೋಕ್ಲು ಹಾಗೂ ಶ್ರೀಮಂಗಲದಲ್ಲಿ ತಲಾ 6 ಸೆಂ.ಮೀ ಮಳೆಯಾಗಿದೆ.

ಮಳೆಯಿಂದ ವಿರಾಜಪೇಟೆ– ಕರಡ ರಸ್ತೆಗೆ ಕೆದಮುಳ್ಳೂರು ಸಮೀಪ ಸಾಕಷ್ಟು ಹಾನಿಯಾಗಿದೆ. ಕೆಲವೆಡೆ ಮಣ್ಣು ಕುಸಿದಿದ್ದು, ಮತ್ತೆ ಕೆಲವೆಡೆ ರಸ್ತೆ ಬಿರುಕು ಬಿಟ್ಟಿದೆ.

ADVERTISEMENT
ಮಡಿಕೇರಿ ಸಮೀಪದ ಅಬ್ಬಿ ಜಲಪಾತದಲ್ಲಿ ಜಲಧಾರೆಯು ಧುಮ್ಮಿಕ್ಕುತ್ತಿರುವ ದೃಶ್ಯ ಗುರುವಾರ ಕಂಡು ಬಂತು ಪ್ರಜಾವಾಣಿ ಚಿತ್ರ/ರೆಜಿತ್‌ಕುಮಾರ್ ಗುಹ್ಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.