ADVERTISEMENT

ಕೊಡಗು: ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

​ಪ್ರಜಾವಾಣಿ ವಾರ್ತೆ
Published 23 ಜುಲೈ 2023, 13:12 IST
Last Updated 23 ಜುಲೈ 2023, 13:12 IST
   

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಹಾಗೂ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿರುವುದರಿಂದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಜುಲೈ 24ರಂದು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.

ಮಳೆ ಜಿಲ್ಲೆಯಲ್ಲಿ ಮುಂದುವರೆದಿದ್ದು, ಸದ್ಯ, ಹಾರಂಗಿ ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣ 31,140 ಕ್ಯುಸೆಕ್ ತಲುಪಿದ್ದು, ನದಿಗೆ 25,500 ಕ್ಯುಸೆಕ್ ತಲುಪಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT