ADVERTISEMENT

ಕೊಡಗು ಮತ್ತೊಂದು ವಯನಾಡ್ ಆಗಬಾರದು; ಬಡಗಲಪುರ ನಾಗೇಂದ್ರ

ಹಿರಿಯ ರಾಜಕಾರಣಿ ಎಂ.ಸಿ.ನಾಣಯ್ಯ ನೇತೃತ್ವದಲ್ಲಿ ಸಭೆ ನಡೆಸಲು ಒತ್ತಾಯ

​ಪ್ರಜಾವಾಣಿ ವಾರ್ತೆ
Published 4 ಆಗಸ್ಟ್ 2024, 16:20 IST
Last Updated 4 ಆಗಸ್ಟ್ 2024, 16:20 IST
ಬಡಗಲಪುರ ನಾಗೇಂದ್ರ
ಬಡಗಲಪುರ ನಾಗೇಂದ್ರ   

ಮಡಿಕೇರಿ: ಕೊಡಗು ಮತ್ತೊಂದು ವಯನಾಡ್ ಆಗಬಾರದು. ಇದಕ್ಕಾಗಿ ಪರಿಸರವಾದಿಗಳು ಮತ್ತು ಸಾಮಾಜಿಕ ಕಳಕಳಿವುಳ್ಳವರು ಹಿರಿಯ ರಾಜಕಾರಣಿ ಎಂ.ಸಿ.ನಾಣಯ್ಯ ಅವರ ನೇತೃತ್ವದಲ್ಲಿ ಸಭೆ ಸೇರಿ ಕ್ರಿಯಾಯೋಜನೆ ರೂಪಿಸಿ, ಸರ್ಕಾರದ ಮುಂದಿಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಒತ್ತಾಯಿಸಿದ್ದಾರೆ.

ಕೊಡಗಿನಲ್ಲೂ ಈ ಹಿಂದೆ ಭೂಕುಸಿತ ಸಂಭವಿಸಿ ಅಪಾರ ಸಾವು, ನೋವುಗಳಾಗಿವೆ. ಇಂತಹ ದುರಂತಗಳು ಮರುಕಳಿಸುವುದನ್ನು ತಡೆಯಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು. ಕೊಡಗಿನ ಪುನಶ್ಚೇತನಕ್ಕೆ ವಿಶೇಷ ಪ್ಯಾಕೇಜ್ ಕೊಡಬೇಕು ಎಂದು ಅವರು ಆಗ್ರಹಿಸಿದ್ದಾರೆ

ವಯನಾಡ್ ದುರಂತವನ್ನು ರಾಷ್ಟ್ರೀಯ ವಿಪತ್ತು ಎಂದು ಕೇಂದ್ರ ಸರ್ಕಾರ ಘೋಷಿಸಬೇಕು ಎಂದು ಆಗ್ರಹಿಸಿರುವ ಅವರು, ಪರಿಸರ ಉಳಿಸಲು ಕಟ್ಟುನಿಟ್ಟಿನ ಕಾನೂನನ್ನು ರೂಪಿಸಬೇಕು ಎಂದು ಮನವಿ ಮಾಡಿದ್ದಾರೆ.

ADVERTISEMENT

ವಯನಾಡ್ ಭೂಕುಸಿತ ಪ್ರಪಂಚದಲ್ಲೇ ಅತ್ಯಂತ ಕಳವಳಕಾರಿಯಾದ ವಿಚಾರ. ಪಶ್ಚಿಮಘಟ್ಟ ಪ್ರದೇಶದಲ್ಲಿ ಅಪಾಯದ ಮುನ್ಸೂಚನೆ ಇರುವ ಕುರಿತು ಪರಿಸರವಾದಿಗಳು ಎಚ್ಚರಿಸಿದಾಗ್ಯೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಿರ್ಲಕ್ಷ್ಯ ಧೋರಣೆ ತಳೆದಿದ್ದರಿಂದ ಇಂತಹದ್ದೊಂದು ದುರಂತ ಸಂಭವಿಸಿದೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.