ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ಮಂಗಳವಾರ ವಿಜೃಂಭವಣೆಯಿಂದ ಗಣಪತಿ ರಥೋತ್ಸವ ನೆರವೇರಿತು. ಕೊಡಗು, ಮೈಸೂರು ಹಾಗೂ ಹಾಸನ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಬಂದಿದ್ದ ಸುಮಾರು 15 ಸಾವಿರಕ್ಕೂ ಅಧಿಕ ಮಂದಿ ರಥೋತ್ಸವಕ್ಕೆ ಸಾಕ್ಷಿಯಾದರು. ಶ್ರೀ ಮಹಾಗಣಪತಿ ದೇವಸ್ಥಾನ ಸೇವಾ ಸಮಿತಿ ವತಿಯಿಂದ ನಡೆಯುತ್ತಿರುವ 104ನೇ ವರ್ಷದ ರಥೋತ್ಸವ ಇದಾಗಿದೆ. ಭಕ್ತರು ಗಣಪತಿ ದೇಗುಲದಿಂದ ಆಂಜನೇಯಸ್ವಾಮಿ ದೇಗುಲದವರೆಗೂ ರಥವನ್ನು ಎಳೆದು ಭಕ್ತಿ ಮೆರೆದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.