ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆ ಗಾಳಿ ಗುರುವಾರ ಮುಂದುವರಿದಿದೆ.
ಬೀಸುತ್ತಿರುವ ಬಿರುಸಿನ ಗಾಳಿಗೆ ಅಲ್ಲಲ್ಲಿ ಮರಗಳು ಬುಡಮೇಲಾಗುತ್ತಿವೆ. ಗುಡ್ಡದಿಂದ ಮಣ್ಣು ರಸ್ತೆಗೆ ಜಾರುತ್ತಿದೆ.
ಸೋಮವಾರಪೇಟೆ ತಾಲ್ಲೂಕಿನ ಶಾಂತಳ್ಳಿ ರಸ್ತೆಯಲ್ಲಿ ಗುಡ್ಡದಿಂದ ಮಣ್ಣು ರಸ್ತೆಗೆ ಬಿದ್ದು ಸಂಚಾರ ಕಡಿತಗೊಂಡಿದೆ. ತಲಕಾವೇರಿ- ಭಾಗಮಂಡಲ ರಸ್ತೆಯಲ್ಲಿ ಮರವೊಂದು ಉರುಳಿ ಬಿದ್ದಿದೆ.
ರಾತ್ರಿ ಬಿರುಸಿನ ಮಳೆ ಸುರಿದ ಕಾರಣಕ್ಕೆ ಸೋಮವಾರಪೇಟೆ ತಾಲ್ಲೂಕಿನ ಶಾಲೆಗಳಿಗೆ ಗುರುವಾರ ರಜೆ ನೀಡಲಾಗಿತ್ತು. ಪೊನ್ನಂಪೇಟೆ ತಾಲ್ಲೂಕಿನ 40 ಶಾಲೆಗಳಿಗೆ ಬುಧವಾರವೇ ರಜೆ ಘೋಷಿಸಲಾಗಿತ್ತು. ಮರಗಳು, ವಿದ್ಯುತ್ ಕಂಬಗಳು ಬಿದ್ದಿರುವುದರಿಂದ ಹಲವೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ.
ಭಾರಿ ಮಳೆ ಬೀಳುವ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ ಜಿಲ್ಗೆಗೆ ಆರೆಂಜ್ ಅಲರ್ಟ್ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.