ADVERTISEMENT

ಲೋಕಸಭಾ ಚುನಾವಣೆ: ಕೊಡಗು ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ

​ಪ್ರಜಾವಾಣಿ ವಾರ್ತೆ
Published 4 ಜೂನ್ 2024, 2:27 IST
Last Updated 4 ಜೂನ್ 2024, 2:27 IST
   

ಮಡಿಕೇರಿ: ಲೋಕಸಭಾ ಚುನಾವಣೆಯ ಮತ ಎಣಿಕೆ ಪ್ರಯುಕ್ತ ಜೂನ್ 4ರಂದು ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಕೊಡಗು ಜಿಲ್ಲೆಯಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ.

4 ರಂದು ಬೆಳಿಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಕೊಡಗು ಜಿಲ್ಲೆಯಾದ್ಯಂತ ಗುಂಪು ಸೇರುವುದು, ಪಟಾಕಿ ಸಿಡಿಸುವುದು, ವಿಜಯೋತ್ಸವ, ಮೆರವಣಿಗೆ, ಪ್ರತಿಭಟನೆ, ಖಾಸಗಿ ವ್ಯಕ್ತಿಗಳು ಧ್ವನಿವರ್ಧಕ ಬಳಸುವುದು, ಮಾರಕ ಆಯುಧಗಳನ್ನು ಹೊಂದಿರುವುದು ಅಥವಾ ಹಿಡಿದು ಓಡಾಡುವುದು ಮುಂತಾದವುಗಳನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಅವರು ಆದೇಶ ಹೊರಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT