ಸುಂಟಿಕೊಪ್ಪ (ಕೊಡಗು ಜಿಲ್ಲೆ): ಇಲ್ಲಿಗೆ ಸಮೀಪದ ಏಳನೇ ಹೊಸಕೋಟೆಯ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಬೆಳಿಗ್ಗೆ ನಿಯಂತ್ರಣ ಕಳೆದುಕೊಂಡ ಲಾರಿಯೊಂದು ಉರುಳಿ ಬಿದ್ದಿದ್ದು, ಚಾಲಕ ನಾಗಭೂಷಣ್ ಎಂಬುವವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಮೈಸೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕೋಳಿ ತುಂಬಿದ ಲಾರಿಯು ಚಾಲಕನ ಹತೋಟಿ ತಪ್ಪಿ ರಸ್ತೆ ಬದಿ ಮಗುಚಿಕೊಂಡಿದೆ.
ಚಾಲಕನಾಗಭೂಷಣ್ ಲಾರಿಯಡಿ ಸಿಲುಕಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆಎಂದು ಪೊಲೀಸರು ತಿಳಿಸಿದ್ದಾರೆ.ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.