ಮಡಿಕೇರಿ: ಇಲ್ಲಿನ ತಲಕಾವೇರಿಯಲ್ಲಿ ಅ. 18ರ ನಸುಕಿನಲ್ಲಿ ನಡೆಯುವ ಪವಿತ್ರ ತೀರ್ಥೋದ್ಭವದ ಅಂಗವಾಗಿ ಭಾನುವಾರ ಭಾಗಮಂಡಲದ ಭಗಂಡೇಶ್ಚರ ದೇಗುಲದಲ್ಲಿ ವಿವಿಧ ಧಾರ್ಮಿಕ ವಿಧಿವಿಧಾನಗಳು ಜರುಗಿದವು.
ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರು ದೇಗುಲದಲ್ಲಿ ಅಕ್ಷಯಪಾತ್ರೆಗೆ ಅಕ್ಕಿ ಹಾಕುವ ಮೂಲಕ ಧಾರ್ಮಿಕ ಕಾರ್ಯಗಳಿಗೆ ಚಾಲನೆ ನೀಡಿದರು.
ಬಳಿಕ ತಲಕಾವೇರಿಗೆ ಭೇಟಿ ನೀಡಿದ ಅವರು ಸಿದ್ಧತೆಗಳನ್ನು ಪರಿಶೀಲಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ತೀರ್ಥೋದ್ಭವದ ವೇಳೆ ಪ್ಲಾಸ್ಟಿಕ್ ನಿಷೇಧಿಸಲಾಗಿದೆ. ಈ ಕುರಿತು ಸಾಕಷ್ಟು ಅರಿವು ಮೂಡಿಸಲಾಗಿದೆ. ಸಾರ್ವಜನಿಕರು ಪ್ಲಾಸ್ಟಿಕ್ ಬಳಕೆ ಮಾಡಬಾರದು ಎಂದು ಮನವಿ ಮಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.