ನಾಪೋಕ್ಲು: ಮಡಿಕೇರಿ ವಿಪತ್ತು ನಿರ್ವಹಣಾ ಘಟಕದ ಮಾಸ್ಟರ್ ಆಗಿ ಬಾಳೆಯಡ ದಿವ್ಯ ಮಂದಪ್ಪ ಆಯ್ಕೆಯಾಗಿದ್ದಾರೆ.
ಉಡುಪಿ ಪ್ರಾದೇಶಿಕ ವಿಭಾಗದ ಕೊಡಗು ಜಿಲ್ಲೆ ವಿರಾಜಪೇಟೆ ಮತ್ತು ಮಡಿಕೇರಿ ತಾಲ್ಲೂಕಿನ ಶೌರ್ಯ ವಿಪತ್ತು ನಿರ್ವಹಣಾ ಘಟಕಗಳ ಕೋರ್ ಕಮಿಟಿ ಸಭೆ ಕುಶಾಲನಗರದ ಧರ್ಮಸ್ಥಳ ಯೋಜನಾ ಘಟಕದ ಕಚೇರಿಯಲ್ಲಿ ಈ ಆಯ್ಕೆ ಮಾಡಲಾಯಿತು.
ಇದಲ್ಲದೆ, ಕ್ಯಾಪ್ಟನ್ ಆಗಿ ದಿನೇಶ್ ಆಯ್ಕೆಯಾದರು. ವಿರಾಜಪೇಟೆ ತಾಲ್ಲೂಕಿನ ಶೌರ್ಯ ವಿಪತ್ತು ನಿರ್ವಹಣಾ ಘಟಕ ಮಾಸ್ಟರ್ ಆಗಿ ನಂಜರಾಯಪಟ್ಟಣದ ವಿಪತ್ತು ನಿರ್ವಹಣಾ ಘಟಕದ ಸಂಯೋಜಕ ತೀರ್ಥಕುಮಾರ್, ಕ್ಯಾಪ್ಟನ್ ರೇಖಾ ಗಣೇಶ್ ಆಯ್ಕೆಯಾದರು.
ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ದೇಶಿಕ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯಸ್ ಕೊಡಗು ಜಿಲ್ಲೆಯ ನಿರ್ದೇಶಕಿ ಲೀಲಾವತಿ, ವಿಪತ್ತು ನಿರ್ವಹಣಾ ಕಾರ್ಯಕ್ರಮ ಯೋಜನಾಧಿಕಾರಿ ಜೈವಂತ್ ಪಟಗಾರ, ಉಡುಪಿ ಪ್ರಾದೇಶಿಕ ವಿಭಾಗದ ಯೋಜನಾಧಿಕಾರಿ ಗಣೇಶ್ ಆಚಾರ್ಯ, ಮಡಿಕೇರಿ ತಾಲ್ಲೂಕಿನ ಕ್ಷೇತ್ರ ಯೋಜನಾಧಿಕಾರಿ ಪುರುಷೋತ್ತಮ, ವಿರಾಜಪೇಟೆ ತಾಲ್ಲೂಕಿನ ಕ್ಷೇತ್ರ ಯೋಜನಾಧಿಕಾರಿ ದಿನೇಶ್, ಉಡುಪಿ ಪ್ರಾದೇಶಿಕ ವಿಭಾಗದ ಜನಜಾಗೃತಿ ಮೇಲ್ವಿಚಾರಕ ನಿತೇಶ್.ಕೆ, ಹಾಗೂ ಮಡಿಕೇರಿ-ವಿರಾಜಪೇಟೆ ತಾಲ್ಲೂಕಿನ ವಲಯ ಮೇಲ್ವಿಚಾರಕರು, ಸಂಯೋಜಕರು, ಘಟಕ ಪ್ರತಿನಿಧಿಗಳು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.