ಮಡಿಕೇರಿ: ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ಮಾಡಿದ ಆರೋಪದ ಮೇರೆಗೆ ಆನಂದ್‌ಕುಮಾರ್ (37) ಎಂಬಾತನಿಗೆ ವಿರಾಜಪೇಟೆಯಲ್ಲಿರುವ 2ನೇ ಹೆಚ್ಚುವರಿ ಮತ್ತು ಜಿಲ್ಲಾ ಸೆಷೆನ್ಸ್ ನ್ಯಾಯಾಲಯವು 20 ವರ್ಷ ಕಠಿಣ ಶಿಕ್ಷೆ ವಿಧಿಸಿದೆ.
ಈತ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ 2017ರ ಜನವರಿಯಿಂದ ಜೂನ್‌ವರೆಗೆ ನಿರಂತರವಾಗಿ ಅತ್ಯಾಚಾರ ಎಸಗಿದ್ದ. ನಂತರ, ದೊಣ್ಣೆಯಿಂದ ಹಲ್ಲೆ ಮಾಡಿ ಕೊಲೆ ಮಾಡುವುದಾಗಿ ಹೆದರಿಸಿ, ಬೇರೆ ಊರಿಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದ. ಈ ಕುರಿತು ಠಾಣೆಯಲ್ಲಿ ದೂರು ದಾಖಲಾಗಿತ್ತು. ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ನ್ಯಾಯಾಲಯವು ಅಪರಾಧಿಗೆ 20 ವರ್ಷಗಳ ಕಠಿಣ ಶಿಕ್ಷೆ ಹಾಗೂ ₹ 55 ಸಾವಿರ ದಂಡ ವಿಧಿಸಿದೆ ಎಂದು ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.