ADVERTISEMENT

ನಾಪೋಕ್ಲು: ವಿವಿಧೆಡೆ ಗಣರಾಜ್ಯೋತ್ಸವ

​ಪ್ರಜಾವಾಣಿ ವಾರ್ತೆ
Published 26 ಜನವರಿ 2024, 12:49 IST
Last Updated 26 ಜನವರಿ 2024, 12:49 IST
ಪೋಕ್ಲುವಿನ  ಶ್ರೀ ರಾಮ ಟ್ರಸ್ಟ್ ವಿದ್ಯಾಸಂಸ್ಥೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯೊಬ್ಬಳು ಗಣರಾಜ್ಯೋತ್ಸವ ದಿನದ ಮಹತ್ವದ ಕುರಿತು ಮಾತನಾಡಿದಳು.
ಪೋಕ್ಲುವಿನ  ಶ್ರೀ ರಾಮ ಟ್ರಸ್ಟ್ ವಿದ್ಯಾಸಂಸ್ಥೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯೊಬ್ಬಳು ಗಣರಾಜ್ಯೋತ್ಸವ ದಿನದ ಮಹತ್ವದ ಕುರಿತು ಮಾತನಾಡಿದಳು.   

ನಾಪೋಕ್ಲು: ಹೋಬಳಿ ವ್ಯಾಪ್ತಿಯ ವಿವಿಧ ಶಾಲಾ ಕಾಲೇಜುಗಳಲ್ಲಿ 75ನೇ ವರ್ಷದ ಗಣರಾಜ್ಯೋತ್ಸವವನ್ನು ಶುಕ್ರವಾರ ಸಂಭ್ರಮದಿಂದ ಆಚರಿಸಲಾಯಿತು.

 ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ದೇಶಭಕ್ತಿ ಗೀತೆ, ರಸಪ್ರಶ್ನೆ, ಭಾಷಣ ಸ್ಪರ್ಧೆಗಳನ್ನು ಏರ್ಪಡಿಸಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಸಮೀಪದ ಕಕ್ಕಬೆ ಕೇಂದ್ರ ವಿದ್ಯಾಸಂಸ್ಥೆಯಲ್ಲಿ ಸಂಸ್ಥೆಯ ಅಧ್ಯಕ್ಷ ಕೇಟೋಳಿರ ಪಿ. ಕುಟ್ಟಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ದಿನದ ಮಹತ್ವದ ಕುರಿತು ವಿದ್ಯಾರ್ಥಿಗಳು ಭಾಷಣ ಮಾಡಿದರು.

ಇಲ್ಲಿನ ಶ್ರೀರಾಮ ಟ್ರಸ್ಟ್ ವಿದ್ಯಾಸಂಸ್ಥೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನಿರ್ದೇಶಕ ಕಲ್ಯಾಟಂಡ ಪೂಣಚ್ಚ ಧ್ವಜಾರೋಹಣ ನೆರವೇರಿಸಿದರು. ನಿರ್ದೇಶಕ ಅಪ್ಪಾರಂಡ ಅಪ್ಪಯ್ಯ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ಪ್ರಾಂಶುಪಾಲ ಕಲ್ಯಾಟಂಡ ಶಾರದಾ ಅಪ್ಪಣ್ಣ ಉಪಸ್ಥಿತರಿದ್ದರು.

ADVERTISEMENT

ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಯಿತು. ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಸಲಾಯಿತು.
ಧ್ವಜಾರೋಹಣ, ದೇಶಭಕ್ತಿ ಗೀತೆ, ನೃತ್ಯ ಸ್ಪರ್ಧೆಗಳನ್ನು ವಿವಿಧ ಶಾಲೆಗಳಲ್ಲಿ ಆಯೋಜಿಸಲಾಗಿತ್ತು. ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ರಾಷ್ಟ್ರೀಯ ಹಬ್ಬದ ಆಚರಣೆ ಹಿನ್ನೆಲೆಯಲ್ಲಿ ವಿವಿಧ ಶಾಲೆಗಳ ವಿದ್ಯಾರ್ಥಿಗಳಿಗೆ ಸಿಹಿ ಹಂಚಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.