ADVERTISEMENT

ಮಡಿಕೇರಿ | ಮಾರ್ಚ್ 3ರಂದು ಪಲ್ಸ್ ಪೋಲಿಯೊ; 36,595 ಮಕ್ಕಳ ಗುರಿ

ಸಿದ್ಧತೆ ಬಗ್ಗೆ ಮಾಹಿತಿ ಪಡೆದ ಜಿಲ್ಲಾಧಿಕಾರಿ ವೆಂಕಟ್ ರಾಜಾ, ಎಲ್ಲ ಇಲಾಖೆಗಳ ಸಹಕಾರಕ್ಕೆ ಸೂಚನೆ

​ಪ್ರಜಾವಾಣಿ ವಾರ್ತೆ
Published 27 ಫೆಬ್ರುವರಿ 2024, 14:41 IST
Last Updated 27 ಫೆಬ್ರುವರಿ 2024, 14:41 IST
<div class="paragraphs"><p>ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಪಲ್ಸ್‌ ಪೋಲಿಯೋ ಕುರಿತು ಜಾಗೃತಿ ಪತ್ರವನ್ನು ಮಂಗಳವಾರ ಜಿಲ್ಲಾಧಿಕಾರಿ ವೆಂಕಟ್ ರಾಜಾ ಬಿಡುಗಡೆ ಮಾಡಿದರು.&nbsp;</p></div>

ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಪಲ್ಸ್‌ ಪೋಲಿಯೋ ಕುರಿತು ಜಾಗೃತಿ ಪತ್ರವನ್ನು ಮಂಗಳವಾರ ಜಿಲ್ಲಾಧಿಕಾರಿ ವೆಂಕಟ್ ರಾಜಾ ಬಿಡುಗಡೆ ಮಾಡಿದರು. 

   

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಾರ್ಚ್ 3ರಿಂದ ಪಲ್ಸ್ ಪೋಲಿಯೊ ಅಭಿಯಾನ ನಡೆಯಲಿದ್ದು, ಒಟ್ಟು 36,595 ಮಕ್ಕಳಿಗೆ ಪೋಲಿಯೊ ಹನಿ ಹಾಕುವ ಗುರಿ ಹೊಂದಲಾಗಿದೆ. ಇವರಲ್ಲಿ 32,261 ಮಕ್ಕಳು ಗ್ರಾಮೀಣ ಪ್ರದೇಶದಲ್ಲೇ ಇದ್ದಾರೆ. ಇದಕ್ಕಾಗಿ ಮಾರ್ಚ್ 4 ಮತ್ತು 5ರಂದು 2 ದಿನಗಳ ಕಾಲ ಗ್ರಾಮೀಣ ಪ್ರದೇಶದಲ್ಲಿ ಮನೆ ಮನೆಗೆ ತೆರಳಿ ಪೋಲಿಯೊ ಹನಿ ಹಾಕಲು ನಿರ್ಧರಿಸಲಾಗಿದೆ. ಇದಕ್ಕಾಗಿ ಒಟ್ಟು 928 ಮಂದಿಯನ್ನು ಆರೋಗ್ಯ ಇಲಾಖೆ ನೇಮಕ ಮಾಡಿದೆ.

ಈ ಕುರಿತು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಮಂಗಳವಾರ ಇಲ್ಲಿ ನಡೆಸಿದ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕೆ.ಎಂ.ಸತೀಶ್ ಕುಮಾರ್ ಈ ಮಾಹಿತಿ ನೀಡಿದರು.

ADVERTISEMENT

ಪಲ್ಸ್ ಪೋಲಿಯೊ ಕಾರ್ಯಕ್ರಮವು ಮಾರ್ಚ್ 3ರಂದು ಬೂತ್ ಮಟ್ಟದಲ್ಲಿ ನಡೆಯಲಿದೆ. 4, 5 ಮತ್ತು 6 ರಂದು 3 ದಿನಗಳ ಕಾಲ ನಗರ ಮತ್ತು ಪಟ್ಟಣ ಪ್ರದೇಶದಲ್ಲಿ ಹಾಗೂ 4 ಮತ್ತು 5ರಂದು 2 ದಿನಗಳ ಕಾಲ ಗ್ರಾಮೀಣ ಪ್ರದೇಶದಲ್ಲಿ ಮನೆ ಮನೆಗೆ ತೆರಳಿ ಪೋಲಿಯೊ ಹನಿ ಹಾಕಲಾಗುತ್ತದೆ ಎಂದು ಅವರು ತಿಳಿಸಿದರು.

‘ಪಲ್ಸ್ ಪೋಲಿಯೊ ಹನಿ ಹಾಕುವ ದಿನಗಳಂದು ಪಂಚಾಯತ್ ರಾಜ್, ಶಿಕ್ಷಣ, ಪೊಲೀಸ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಪ್ರಾದೇಶಿಕ ಸಾರಿಗೆ ಇಲಾಖೆಗಳು ಅಗತ್ಯ ಸಹಕಾರ ನೀಡಬೇಕು’ ಎಂದು ಅವರು ಇದೇ ವೇಳೆ ಮನವಿ ಮಾಡಿದರು.

ಈ ಕುರಿತು ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ, ‘ಈ ಕುರಿತು ಎಲ್ಲ ಇಲಾಖೆಗಳ ಅಧಿಕಾರಿಗಳು ಅಗತ್ಯ ಸಹಕಾರ ನೀಡಬೇಕು’ ಎಂದು ಸೂಚಿಸಿದರು.

‘ಶಾಲೆಗಳು, ಬಸ್ ನಿಲ್ದಾಣಗಳಲ್ಲಿ ಹಾಗೂ ಜನ ದಟ್ಟಣೆ ಪ್ರದೇಶಗಳಲ್ಲಿ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪಲ್ಸ್ ಪೋಲಿಯೊ ಹನಿ ಹಾಕಲು ಎಲ್ಲರೂ ಸಹಕಾರ ನೀಡಬೇಕು. ಪ್ರಾದೇಶಿಕ ಸಾರಿಗೆ ಇಲಾಖೆಯಿಂದ ಅಗತ್ಯ ವಾಹನ ನಿಯೋಜಿಸುವಂತೆಯೂ’ ಅವರು ನಿರ್ದೇಶನ ನೀಡಿದರು.

‘ಪಲ್ಸ್ ಪೋಲಿಯೊ ಕಾರ್ಯಕ್ರಮ ದಿನದಂದು ವಿದ್ಯುತ್ ಸಂಪರ್ಕವನ್ನು ನಿರಂತರವಾಗಿ ಕಲ್ಪಿಸಬೇಕು. ಪಲ್ಸ್ ಪೋಲಿಯೋ ಕಾರ್ಯಕ್ರಮ ಯಶಸ್ಸುಗೊಳಿಸುವ ನಿಟ್ಟಿನಲ್ಲಿ ರೋಟರಿ, ಲಯನ್ಸ್, ರೆಡ್‍ಕ್ರಾಸ್ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಸಹಕಾರ ಪಡೆಯುವಂತೆಯೂ’ ಅವರು ಸಲಹೆ ನೀಡಿದರು.

‘ಪ್ರವಾಸಿ ಸ್ಥಳಗಳು, ಬಸ್ ನಿಲ್ದಾಣಗಳಲ್ಲಿ ಪೋಲಿಯೊ ಬೂತ್ ತೆರೆಯಲು ಅವಕಾಶ ಮಾಡಿಕೊಡಬೇಕು. ಕಾರ್ಮಿಕರ ಮಕ್ಕಳು, ಕೊಳಗೇರಿ ಪ್ರದೇಶದಲ್ಲಿನ ಮಕ್ಕಳಿಗೆ ಪಲ್ಸ್ ಪೋಲಿಯೊ ಹನಿ ಹಾಕಲು ಸಹಕರಿಸುವಂತೆಯೂ’ ಹೇಳಿದರು.

ಆರ್‌ಸಿಎಚ್ ಅಧಿಕಾರಿ ಡಾ.ಮಧುಸೂದನ, ಜಿಲ್ಲಾ ಸರ್ಜನ್ ಡಾ.ನಂಜುಂಡಯ್ಯ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕ ಡಾ.ವಿಶಾಲ್ ಕುಮಾರ್, ತಾಲ್ಲೂಕು ವೈದ್ಯಾಧಿಕಾರಿ ಡಾ.ಚೇತನ್, ಡಾ.ಯತಿರಾಜು, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಪುಟ್ಟರಾಜು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ನಟರಾಜು, ನಗರಸಭೆ ಎಂಜಿನಿಯರ್ ಸೌಮ್ಯಾ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ಯೋಜನಾ ಸಮನ್ವಯಾಧಿಕಾರಿ ಎಂ.ಕೃಷ್ಣಪ್ಪ ಭಾಗವಹಿಸಿದ್ದರು.

ಸಭೆಯಲ್ಲಿ ಭಾಗವಹಿಸಿದ್ದ ವಿವಿಧ ಇಲಾಖೆಗಳ ಅಧಿಕಾರಿಗಳು
5 ವರ್ಷದೊಳಗಿನ ಮಕ್ಕಳು ಯಾರೂ ಬಿಟ್ಟು ಹೋಗದಂತೆ ಗಮನಹರಿಸಬೇಕು. ಅಂಗನವಾಡಿ ಶಾಲೆಗಳು ಪ್ರವಾಸಿ ಸ್ಥಳಗಳು ಗಡಿ ಪ್ರದೇಶಗಳು ಇತರೆ ಎಲ್ಲೆಡೆ 5 ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೊ ಹನಿ ಹಾಕಿಸಬೇಕು
ವೆಂಕಟ್ ರಾಜಾ ಕೊಡಗು ಜಿಲ್ಲಾಧಿಕಾರಿ.

ಕೊಡಗು ಜಿಲ್ಲೆಯಲ್ಲಿ ಮಾರ್ಚ್ 3ರಿಂದ ಪಲ್ಸ್ ಪೋಲಿಯೋ ಅಭಿಯಾನ

ಪೋಲಿಯೋ ಹನಿ ಹಾಕಬೇಕಾದ ಮಕ್ಕಳ ಸಂಖ್ಯೆ;36595 

ಒಟ್ಟು ಬೂತ್‍ಗಳು;464 

ಸಂಚಾರಿ ಬೂತ್‍ಗಳು;31 

ಲಸಿಕೆ ನೀಡುವವರು;1920

ಮೇಲ್ವಿಚಾರಕರು;86

ಮನೆಮನೆಗೆ ಭೇಟಿ ನೀಡುವವರು;928

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.