ADVERTISEMENT

ಹೋಂಸ್ಟೇ; 2025ರಿಂದ ಹೊಸ ನೀತಿ ಜಾರಿ: ಡಾ.ಕೆ.ವಿ.ರಾಜೇಂದ್ರ

​ಪ್ರಜಾವಾಣಿ ವಾರ್ತೆ
Published 25 ಅಕ್ಟೋಬರ್ 2024, 0:10 IST
Last Updated 25 ಅಕ್ಟೋಬರ್ 2024, 0:10 IST
<div class="paragraphs"><p>ಹೋಂಸ್ಟೇ</p></div>

ಹೋಂಸ್ಟೇ

   

ಮಡಿಕೇರಿ: ‘ರಾಜ್ಯದಲ್ಲಿ ಹೋಂ ಸ್ಟೇ ನಿರ್ವಹಣೆ ಸಂಬಂಧ ನೂತನ ನೀತಿಯನ್ನು ಮುಂದಿನ ಜನವರಿ-ಫೆಬ್ರವರಿಯಲ್ಲಿ ಪ್ರಕಟಿಸಲಾಗುವುದು’ ಎಂದು ಪ್ರವಾಸೋದ್ಯಮ ಇಲಾಖೆ ನಿರ್ದೇಶಕ ಡಾ.ಕೆ.ವಿ.ರಾಜೇಂದ್ರ ತಿಳಿಸಿದರು.

ನಗರದ ಹೊರವಲಯದ ರೆಸಾರ್ಟ್‍ನಲ್ಲಿ ಗುರುವಾರ ಕರ್ನಾಟಕ ಪ್ರವಾಸೋದ್ಯಮ ಸೊಸೈಟಿ ಮತ್ತು ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ವತಿಯಿಂದ ನಡೆದ ‘ಕನೆಕ್ಟ್ ಕರ್ನಾಟಕ-2024’ ಕಾರ್ಯಕ್ರಮದಲ್ಲಿ ಮಾತನಾಡಿ, ‘ನೋಂದಣಿ ಮಾಡಿಕೊಂಡು ಪ್ರವಾಸಿಗರಿಗೆ ಉತ್ತಮ ಮೂಲಸೌಕರ್ಯ ಕಲ್ಪಿಸುವಂಥ ಹೋಂಸ್ಟೇಗಳಿಗೆ ಪ್ರೋತ್ಸಾಹ ನೀಡಲಾಗುವುದು’ ಎಂದರು.

ADVERTISEMENT

‘ಪ್ರವಾಸೋದ್ಯಮ ಕ್ಷೇತ್ರದಲ್ಲಿ ರಾಜ್ಯವು ದೇಶದಲ್ಲಿ 10ನೇ ಸ್ಥಾನದ ಒಳಗಿದೆ. ಕೊಡಗು ಜಿಲ್ಲೆಯು ರಾಜ್ಯದಲ್ಲಿ 3ನೇ ಸ್ಥಾನದಲ್ಲಿದೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.