ಮಡಿಕೇರಿ: ಕೊಡಗಿನ ಅಜ್ಜಿಕುಟ್ಟೀರ ಎಸ್. ಬೋಪಣ್ಣ ಅವರು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಆಗಿ ನೇಮಕಗೊಂಡಿದ್ದಾರೆ.
ಬೋಪಣ್ಣ ಅವರು ಗೌಹಾಟಿ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ 2018ರ ಅಕ್ಟೋಬರ್‌ನಿಂದ ಕರ್ತವ್ಯ ನಿರ್ವಹಿಸುತ್ತಿದ್ದರು. ಬೋಪಣ್ಣ ಅವರೊಂದಿಗೆ ಜಾರ್ಖಂಡ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಅನಿರುದ್ಧ್ ಬೋಸ್ ಅವರೂ ಸುಪ್ರೀಂ ಕೋರ್ಟ್‌ಗೆ ನೇಮಕವಾಗಿದ್ದಾರೆ. ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಅವರನ್ನು ಒಳಗೊಂಡ ಉನ್ನತಮಟ್ಟದ ಸಮಿತಿಯು ಈ ಇಬ್ಬರ ಬಡ್ತಿಗೆ ಶಿಫಾರಸು ಮಾಡಿತ್ತು.
ಕೊಡಗು ಜಿಲ್ಲೆಯಿಂದ ಪ್ರಥಮ ಬಾರಿಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಆಗಿ ನೇಮಕವಾದ ಹೆಗ್ಗಳಿಗೂ ಬೋಪಣ್ಣ ಅವರು ಪಾತ್ರರಾಗಿದ್ದಾರೆ. ರಾಜ್ಯ ಹೈಕೋರ್ಟ್‌ನ ನ್ಯಾಯಮೂರ್ತಿ ಆಗಿಯೂ ಕರ್ತವ್ಯ ನಿರ್ವಹಿಸಿದ್ದರು.
ಸುಪ್ರೀಂ ಕೋರ್ಟ್‌ನ 31 ನ್ಯಾಯಮೂರ್ತಿಗಳ ಪೈಕಿ 27 ಮಂದಿ ಕರ್ತವ್ಯ ನಿರ್ವಹಿಸುತ್ತಿದ್ದರು. 4 ಸ್ಥಾನಗಳು ಖಾಲಿಯಿದ್ದವು. ಈಗ ಎರಡು ಸ್ಥಾನಗಳಿಗೆ ನೇಮಕಾತಿಯಿಂದಾಗಿ ನ್ಯಾಯಮೂರ್ತಿಗಳ ಸಂಖ್ಯೆ 29ಕ್ಕೆ ಏರಿಕೆಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.