ADVERTISEMENT

ಶಿಕ್ಷಣ ಸಚಿವರನ್ನು ಭೇಟಿ ಮಾಡಿದ ಶಾಸಕ ಪೊನ್ನಣ್ಣ

​ಪ್ರಜಾವಾಣಿ ವಾರ್ತೆ
Published 23 ಜೂನ್ 2024, 5:08 IST
Last Updated 23 ಜೂನ್ 2024, 5:08 IST
‘ಪ್ರಜಾವಾಣಿ’ಯ ‘ನಮ್ಮ ಜನ ನಮ್ಮ ಧ್ವನಿ’ ಅಂಕಣದಲ್ಲಿ ಸೋಮವಾರವಷ್ಟೇ ಶಿಥಿಲ ಶಾಲೆಗಳ ಕುರಿತು ವಿಸ್ತೃತವಾದ ವರದಿ ಪ್ರಕಟಗೊಂಡಿತ್ತು.
‘ಪ್ರಜಾವಾಣಿ’ಯ ‘ನಮ್ಮ ಜನ ನಮ್ಮ ಧ್ವನಿ’ ಅಂಕಣದಲ್ಲಿ ಸೋಮವಾರವಷ್ಟೇ ಶಿಥಿಲ ಶಾಲೆಗಳ ಕುರಿತು ವಿಸ್ತೃತವಾದ ವರದಿ ಪ್ರಕಟಗೊಂಡಿತ್ತು.   

ಮಡಿಕೇರಿ: ವಿರಾಜಪೇಟೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳ ಅಭಿವೃದ್ಧಿ ಹಾಗೂ ಕೊಠಡಿಗಳ ನಿರ್ಮಾಣದ ಕುರಿತು ಮುಖ್ಯಮಂತ್ರಿ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಅವರು ಶನಿವಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತ ಸಚಿವ ಎಸ್.ಮಧು ಬಂಗಾರಪ್ಪ ಅವರ ನಿವಾಸದಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು ಎಂದು ಪ್ರಕಟಣೆ ತಿಳಿಸಿದೆ.

‘ಪ್ರಜಾವಾಣಿ’ ಈ ಕುರಿತು ಜೂನ್ 17ರಂದು ‘ಶಾಲೆಗಳ ತುರ್ತು ದುರಸ್ತಿಗೆ ಬೇಕಿದೆ ₹ 1.08 ಕೋಟಿ’ ಎಂಬ ಶೀರ್ಷಿಕೆಯಡಿ ವಿಶೇಷ ವರದಿ ಪ್ರಕಟಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT