ADVERTISEMENT

ಪಿಯು ಕಾಲೇಜು ಶುಲ್ಕ ಹೆಚ್ಚಳ ಬೇಡ; ಸುಭಾಷ್

​ಪ್ರಜಾವಾಣಿ ವಾರ್ತೆ
Published 8 ಜನವರಿ 2024, 7:00 IST
Last Updated 8 ಜನವರಿ 2024, 7:00 IST

ಮಡಿಕೇರಿ: ಪಿಯು ಕಾಲೇಜುಗಳ ಶುಲ್ಕ ಹೆಚ್ಚಳದ ಪ್ರಸ್ತಾವವನ್ನು ಪಿಯು ಇಲಾಖೆ ಸರ್ಕಾರದ ಮುಂದಿರಿಸಿದೆ. ಕಾಲೇಜು ಸಂಯೋಜಕತ್ವ ಶುಲ್ಕವನ್ನೂ ಸಹ ಹೆಚ್ಚಿಸಬೇಕು ಹಾಗೂ 3 ವರ್ಷಕ್ಕೊಮ್ಮೆ ಶುಲ್ಕ ಹೆಚ್ಚಳ ಮಾಡಬೇಕು ಎಂದು ಇಲಾಖೆ ಬೇಡಿಕೆಯನ್ನಿಟ್ಟಿದೆ. ರಾಜ್ಯ ಸರ್ಕಾರ ಈ ಪ್ರಸ್ತಾವವನ್ನು ಸಾರಸಗಟಾಗಿ ತಿರಸ್ಕರಿಸಬೇಕು ಎಂದು ಎಐಡಿಎಸ್‌ಒ ರಾಜ್ಯ ಸಮಿತಿ ಆಗ್ರಹಿಸಿದೆ.

ಪಿಯು ಕಾಲೇಜುಗಳ ಮೂಲಸೌಕರ್ಯಗಳ ಅಭಿವೃದ್ಧಿಗೆ ವಿದ್ಯಾರ್ಥಿಗಳ ಶುಲ್ಕದ ಹಣದಿಂದ ಆದಾಯ ಪಡೆದಲ್ಲಿ, ಸರ್ಕಾರಿ ಕಾಲೇಜುಗಳಿಗೂ, ಖಾಸಗಿ ಕಾಲೇಜುಗಳಿಗೂ ಯಾವುದೇ ವ್ಯತ್ಯಾಸವಿರುವುದಿಲ್ಲ. ಹಣಕಾಸು ಕೊರತೆಯ ನೆಪವೊಡ್ಡಿ ಎಲ್ಲ ಸರ್ಕಾರಿ ಶಿಕ್ಷಣ ಸಂಸ್ಥೆಗಳು ಈ ರೀತಿ ಶುಲ್ಕ ಹೆಚ್ಚಿಸುತ್ತಾ ಹೋಗುತ್ತಿರುವುದು ಸರಿಯಲ್ಲ ಎಂದು ಸಮಿತಿಯ ಕೊಡಗು ಜಿಲ್ಲಾ ಸಂಚಾಲಕ ಸುಭಾಷ್ ಖಂಡಿಸಿದ್ದಾರೆ.

ತೀವ್ರ ಆರ್ಥಿಕ ಬಿಕ್ಕಟ್ಟಿನ ಕಾರಣ ಈಗಾಗಲೇ ಎಲ್ಲ ಹಂತಗಳಲ್ಲಿ ವಿದ್ಯಾಭ್ಯಾಸ ತೊರೆಯುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ಉನ್ನತ ಶಿಕ್ಷಣದ ಶುಲ್ಕ, ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿಯೇ ದುಬಾರಿಯಾಗುತ್ತಿದೆ. ಈ ಹಿನ್ನೆಲೆಯಲ್ಲಿ, ಬಡ ಹಾಗೂ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಯಾವುದೇ ಕಾರಣಕ್ಕೂ ಶುಲ್ಕ ಹೆಚ್ಚಳದ ಪ್ರಸ್ತಾವಕ್ಕೆ ಸರ್ಕಾರ ಅನುಮೋದನೆ ನೀಡಬಾರದು ಎಂದು ಅವರು ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.