ADVERTISEMENT

ಸಿದ್ದಾಪುರ: ಇಂಧನ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 20 ಜೂನ್ 2024, 5:57 IST
Last Updated 20 ಜೂನ್ 2024, 5:57 IST
ಇಂಧನ ಬೆಲೆ ಏರಿಕೆ ಖಂಡಿಸಿ ನೆಲ್ಯಹುದಿಕೇರಿಯಲ್ಲಿ ಸಿಪಿಎಂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು
ಇಂಧನ ಬೆಲೆ ಏರಿಕೆ ಖಂಡಿಸಿ ನೆಲ್ಯಹುದಿಕೇರಿಯಲ್ಲಿ ಸಿಪಿಎಂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು   

ಸಿದ್ದಾಪುರ: ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಸಿದ್ದ ರಾಜ್ಯ ಸರ್ಕಾರದ ಕ್ರಮವನ್ನು ವಿರೋಧಿಸಿ ನೆಲ್ಯಹುದಿಕೇರಿ ಪಟ್ಟಣದಲ್ಲಿ ಸಿಪಿಎಂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಪಕ್ಷದ ಮುಖಂಡ ಪಿ.ಆರ್ ಭರತ್ ಮಾತನಾಡಿ, ‘ದೇಶದಾದ್ಯಂತ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಜನಸಾಮಾನ್ಯರು ಬದುಕು ಸಾಗಿಸುವುದೇ ಕಷ್ಟವಾಗಿದೆ. ಹೀಗಿರುವಾಗ ರಾಜ್ಯ ಸರ್ಕಾರ ಇಂಧನ ಬೆಲೆಯನ್ನು ದಿಢೀರನೆ ಏರಿಕೆ ಮಾಡಿದ್ದು, ಜನಸಾಮಾನ್ಯರ ಮೇಲೆ ಮತ್ತಷ್ಟು ಹೊರೆ ಬೀಳಲಿದೆ. ಅಗತ್ಯ ವಸ್ತುಗಳ ಬೆಲೆ ಮತ್ತಷ್ಟು ಹೆಚ್ಚಾಗಲಿದ್ದು, ಕಾರ್ಮಿಕರು ಸೇರಿದಂತೆ ಸಾಮಾನ್ಯ ವರ್ಗದ ಜನ ಮತ್ತಷ್ಟು ಸಮಸ್ಯೆ ಎದುರಿಸಬೇಕಾಗುತ್ತದೆ. ಕೂಡಲೇ ರಾಜ್ಯ ಸರ್ಕಾರ ಇಂಧನ ಬೆಲೆಯನ್ನು ಕಡಿಮೆ ಮಾಡಬೇಕು’ ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಪಕ್ಷದ ಪ್ರಮುಖರಾದ ಟಿ.ಟಿ.ಉದಯ ಕುಮಾರ್, ಮೊಣ್ಣಪ್ಪ, ಜೋಸ್ ಮುಸ್ತಫಾ, ರಘು, ಚಂದ್ರನ್, ಭೋಜಿ ಭಾಗವಹಿಸಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.