ADVERTISEMENT

ಭಾಗಮಂಡಲ, ಮಡಿಕೇರಿಯಲ್ಲಿ ಮುಂದುವರಿದ ಮಳೆ

​ಪ್ರಜಾವಾಣಿ ವಾರ್ತೆ
Published 7 ಜುಲೈ 2024, 5:21 IST
Last Updated 7 ಜುಲೈ 2024, 5:21 IST
ಕೊಡಗು ಜಿಲ್ಲೆಯ ಕುಶಾಲನಗರ ಸಮೀಪದ ತೆಪ್ಪದಕಂಡಿ ತೂಗುಸೇತುವೆ ಬಳಿ ಕಾವೇರಿ ನದಿ ಮೈದುಂಬಿ ಹರಿಯುತ್ತಿದೆ ಪ್ರಜಾವಾಣಿ ಚಿತ್ರ/ರಘು ಹೆಬ್ಬಾಲೆ
ಕೊಡಗು ಜಿಲ್ಲೆಯ ಕುಶಾಲನಗರ ಸಮೀಪದ ತೆಪ್ಪದಕಂಡಿ ತೂಗುಸೇತುವೆ ಬಳಿ ಕಾವೇರಿ ನದಿ ಮೈದುಂಬಿ ಹರಿಯುತ್ತಿದೆ ಪ್ರಜಾವಾಣಿ ಚಿತ್ರ/ರಘು ಹೆಬ್ಬಾಲೆ   

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಶನಿವಾರ ಮಳೆ ಮುಂದುವರಿದಿದ್ದು, ಮಡಿಕೇರಿ ನಗರದಲ್ಲಿ ಅತ್ಯಂತ ಬಿರುಸಿನಿಂದ ಮೂರ್ನಾಲ್ಕು ಬಾರಿ ಮಳೆ ಸುರಿಯಿತು.

ಶನಿವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಭಾಗಮಂಡಲ ಹೋಬಳಿ ವ್ಯಾಪ್ತಿಯಲ್ಲಿ 5 ಸೆಂ.ಮೀ, ಮಡಿಕೇರಿ ಹಾಗೂ ಸುತ್ತಮುತ್ತ 3.8., ನಾಪೋಕ್ಲು ಮತ್ತು ಶಾಂತಳ್ಳಿ ವ್ಯಾಪ್ತಿಯಲ್ಲಿ ತಲಾ 3, ಸುಂಟಿಕೊಪ್ಪ ಹಾಗೂ ವಿರಾಜಪೇಟೆ ವ್ಯಾಪ್ತಿಯಲ್ಲಿ ತಲಾ 2 ಸೆಂ.ಮೀನಷ್ಟು ಮಳೆಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT