ADVERTISEMENT

ರಾಣಿ ಅಹಲ್ಯಾಬಾಯಿ ಹೋಳ್ಕರ್ ಜಯಂತಿ

ಕಿಬ್ಬೆಟ್ಟ ಬಸವೇಶ್ವರ ದೇವಾಲಯದಲ್ಲಿ 

​ಪ್ರಜಾವಾಣಿ ವಾರ್ತೆ
Published 17 ನವೆಂಬರ್ 2024, 8:18 IST
Last Updated 17 ನವೆಂಬರ್ 2024, 8:18 IST
ಸೋಮವಾರಪೇಟೆ ಸಮೀಪದ ಕಿಬ್ಬೆಟ್ಟ ಬಸವೇಶ್ವರ ದೇವಾಲಯದಲ್ಲಿ ನಡೆದ ರಾಣಿ ಅಹಲ್ಯಾಬಾಯಿ ಹೋಳ್ಕರ್ ಅವರ 300ನೇ ಜಯಂತಿ ಅಂಗವಾಗಿ ಸ್ವಚ್ಛತಾ ಕಾರ್ಯ ನಡೆಯಿತು
ಸೋಮವಾರಪೇಟೆ ಸಮೀಪದ ಕಿಬ್ಬೆಟ್ಟ ಬಸವೇಶ್ವರ ದೇವಾಲಯದಲ್ಲಿ ನಡೆದ ರಾಣಿ ಅಹಲ್ಯಾಬಾಯಿ ಹೋಳ್ಕರ್ ಅವರ 300ನೇ ಜಯಂತಿ ಅಂಗವಾಗಿ ಸ್ವಚ್ಛತಾ ಕಾರ್ಯ ನಡೆಯಿತು   

ಸೋಮವಾರಪೇಟೆ: ರಾಣಿ ಅಹಲ್ಯಾ ಬಾಯಿ ಹೋಳ್ಕರ್ ತ್ರಿ ಶತಾಬ್ದಿ ಆಚರಣೆ ಸಮಿತಿ ವತಿಯಿಂದ ಶಿವಭಕ್ತೆ ಅಹಲ್ಯಾ ಅವರ 300ನೇ ವರ್ಷದ ಜಯಂತಿ ಕಾರ್ಯಕ್ರಮ ಸಮೀಪದ ಕಿಬ್ಬೆಟ್ಟ ಗ್ರಾಮದ ಬಸವೇಶ್ವರ ದೇವಾಲಯದಲ್ಲಿ ಈಚೆಗೆ ನಡೆಯಿತು.

ಕಾರ್ಯಕ್ರಮದ ಅಂಗವಾಗಿ ಸಮಿತಿ ಸದಸ್ಯರು ದೇವಾಲಯ ಆವರಣದಲ್ಲಿ ಸ್ವಚ್ಛತೆ ಮಾಡಿದರು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಲೇಖಕಿ ಜಲಕಾಳಪ್ಪ ಮಾತನಾಡಿ, ರಾಣಿ ಅಹಲ್ಯಾ ಬಾಯಿ ಹೋಳ್ಕರ್ ಮರಾಠ ಸಾಮ್ರಾಜ್ಯದಲ್ಲಿದ್ದ ಮಾಲ್ವ ಪ್ರಾಂತ್ಯದ ರಾಣಿಯಾಗಿದ್ದರು. 34 ವರ್ಷಗಳ ಕಾಲ ರಾಜ್ಯವನ್ನಾಳಿದ ಇವರನ್ನು ದೇವಾಲಯ ರಾಣಿ ಎಂದು ಕರೆಯುತ್ತಾರೆ. ಈಕೆ ನಿರ್ಮಿಸಿರುವ ದೇವಾಲಯಗಳು, ಸ್ನಾನಘಟ್ಟಗಳು, ಧರ್ಮಛತ್ರಗಳು ಭಾರತೀಯ ವಾಸ್ತುಶಿಲ್ಪ ಮತ್ತು ಅದರ ವಿವಿಧ ವೈಶಿಷ್ಟ್ಯಗಳನ್ನು ಅಭಿವ್ಯಕ್ತಪಡಿಸುತ್ತವೆ ಎಂದರು.

ಕಾಶಿ ವಿಶ್ವನಾಥ ದೇವಾಲಯ ಸೇರಿದಂತೆ ಅಕ್ರಮಣಕಾರಿಗಳಿಂದ ಭಗ್ನವಾಗಿದ್ದ ಸುಮಾರು 3,115 ಶಿವನ ದೇವಸ್ಥಾನಗಳ ಜೊತೆಗೆ 12 ಜ್ಯೋತಿರ್ಲಿಂಗಗಳನ್ನು ಪುನರ್ ಪ್ರತಿಷ್ಠಾಪಿಸಿದ ಮಹಾನ್ ಶಿವ ಭಕ್ತಿಯಾಗಿದ್ದಾರೆ ಎಂದು ಹೇಳಿದರು. ಪ್ರಮುಖರಾದ ಪವಿತ್ರ ಶೇಷಾದ್ರಿ, ಪುಷ್ಪ ನರೇಶ್, ಭಾನುಮತಿ ಆದರ್ಶ್, ರೂಪ ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.