ಮಡಿಕೇರಿ: 15 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ ಬಿ.ಎಂ.ರಂಜಾನ್ ಪೂಜಾರಿ (33) ಎಂಬಾತನಿಗೆ ಇಲ್ಲಿನ ಪ್ರಧಾನ ಜಿಲ್ಲಾ ಮತ್ತು ಸೆಷೆನ್ಸ್ ನ್ಯಾಯಾಲಯವು 20 ವರ್ಷಗಳ ಜೈಲು ಶಿಕ್ಷೆ ಹಾಗೂ ₹ 5 ಸಾವಿರ ದಂಡ ವಿಧಿಸಿದೆ.
ಆಟೊ ಚಾಲಕನಾಗಿದ್ದ ಆರೋಪಿಯು ತನ್ನ ಮನೆಯ ಸಮೀಪವಿದ್ದ ಬಾಲಕಿಯೊಬ್ಬಳ ಸ್ನೇಹ ಸಂಪಾದಿಸಿ 2020ರ ಅಕ್ಟೋಬರ್ 30ರಂದು ಆಟೊದಲ್ಲಿ ಮನೆಗೆ ಕರೆದೊಯ್ದು ಅತ್ಯಾಚಾರವೆಸಗಿದ್ದ. ಬಾಲಕಿ ಗರ್ಭಿಣಿಯಾದಾಗ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ತನಿಖೆ ನಡೆಸಿದ ಇನ್‌ಸ್ಪೆಕ್ಟರ್ ಪಿ.ಪಿ.ಸೋಮೇಗೌಡ ಮತ್ತು ಎಸ್.ಎಸ್.ರವಿಕಿರಣ್ ಅವರು ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಎಚ್.ಸಿ.ಶಾಮ್ ಪ್ರಸಾದ್ ಶಿಕ್ಷೆ ವಿಧಿಸಿದರು.
ಸರ್ಕಾರದ ಪರವಾಗಿ ಪಬ್ಲಿಕ್ ಪ್ರಾಸಿಕ್ಯೂಟರ್ ಬಿ.ಎಸ್.ರುದ್ರ ಪ್ರಸನ್ನ ವಾದ ಮಂಡಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.