ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ಬುಧವಾರ ಮುಂದುವರಿದಿದ್ದು, ಹವಾಮಾನ ಇಲಾಖೆ ಮುಂದಿನ 2 ದಿನಗಳ ಕಾಲ ಅತಿ ಭಾರಿ ಮಳೆ ಬೀಳುವ ಮುನ್ಸೂಚನೆ ನೀಡಿ, ರೆಡ್ ಅಲರ್ಟ್ ನೀಡಿದೆ.
ಇದರಿಂದ ಜಿಲ್ಲೆಯ ಎಲ್ಲ ಅಂಗನವಾಡಿಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಹಾಗೂ ಪಿಯು ತರಗತಿಗಳಿಗೆ ಜುಲೈ 18ರಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ರಜೆ ಘೋಷಿಸಿದ್ದಾರೆ.
ಬೆಳಿಗ್ಗೆಯಿಂದ ತುಸು ಬಿಡುವು ನೀಡಿದ್ದ ಮಳೆ ಮಧ್ಯಾಹ್ನದ ನಂತರ ಧಾರಾಕಾರವಾಗಿ ಸುರಿಯುತ್ತಿದೆ. ಸಂಜೆಯ ನಂತರ ಮಳೆ ಇನ್ನಷ್ಟು ಬಿರುಸು ಪಡೆದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.